ಆ್ಯಪ್ನಗರ

ಇಂದು ಸಿದ್ದು, ಜಿಟಿಡಿ ನಾಮಪತ್ರ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿದ್ದಾಜಿದ್ದಿ ಸ್ಪರ್ಧೆಗೆ ಇಳಿದಿರುವ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಇಬ್ಬರೂ ಏ.20ರ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.

Vijaya Karnataka 20 Apr 2018, 5:00 am
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿದ್ದಾಜಿದ್ದಿ ಸ್ಪರ್ಧೆಗೆ ಇಳಿದಿರುವ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಇಬ್ಬರೂ ಏ.20ರ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ.
Vijaya Karnataka Web mysore siddaramaiah jgd election nomination
ಇಂದು ಸಿದ್ದು, ಜಿಟಿಡಿ ನಾಮಪತ್ರ


ಮಿನಿ ವಿಧಾನಸೌಧದಲ್ಲಿರುವ ಮೈಸೂರು ತಾಲೂಕು ತಹಸೀಲ್ದಾರ್‌ ಕಚೇರಿಯಲ್ಲಿ ಚುನಾವಣಾಧಿಕಾರಿ ಗಳಿಗೆ ಇಬ್ಬರೂ ನಾಮಪತ್ರ ಸಲ್ಲಿಸಲಿ ದ್ದಾರೆ. ಸಿದ್ದರಾಮಯ್ಯ ಮಧ್ಯಾಹ್ನ 2 ರಿಂದ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಸ್ವಗ್ರಾಮ ಸಿದ್ದರಾಮನ ಹುಂಡಿಗೆ ಭೇಟಿ ನೀಡುವರು. ನಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸುವರು.

ಸಿದ್ದರಾಮಯ್ಯ ಕಳೆದ ಎರಡು ಬಾರಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈ ಬಾರಿ ಈ ಹಿಂದೆ ತಾವು 5 ಬಾರಿ ಪ್ರತಿನಿಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಾಪಸಾಗಿ ಮತಯಾಚನೆ ನಡೆಸಿದ್ದಾರೆ. ತಾವು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮತ ಕೇಳಿದ್ದಾರೆ. ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹಾಗೂ ಸಿದ್ದರಾಮಯ್ಯ ಮಧ್ಯೆ ಪ್ರಬಲ ಪೈಪೋಟಿ ಇದ್ದು ಚುನಾವಣಾ ಕಣ ರಂಗೇರಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ