ಆ್ಯಪ್ನಗರ

ಸಿದ್ದರಾಮಯ್ಯ ಕ್ಷಮೆಗೆ ಒತ್ತಾಯಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದ ಮೈಸೂರು ವಕೀಲರು

ಮೈಸೂರು ವಿವಿ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನ ವಿಚಾರದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಕೀಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ, ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ ವಕೀಲರ ಸಂಘ ಪ್ರತಿಭಟನೆ ನಡೆಸಿದೆ.

Vijaya Karnataka Web 23 Jan 2020, 4:23 pm
ಮೈಸೂರು: ಮೈಸೂರು ವಿವಿ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನ ವಿಚಾರದ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಕೀಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಗುರುವಾರ ವಕೀಲರುಗಳು ಕಲಾಪ ಬಹಿಷ್ಕರಿಸಿ ನ್ಯಾಯಾಲಯದ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web mysuru advocates


ಇಂದು ನ್ಯಾಯಾಲಯದ ಎದುರು ನೆರೆದ ಮೈಸೂರು ವಕೀಲರ ಸಂಘದ ನ್ಯಾಯವಾದಿಗಳು ಕಲಾಪಗಳಿಂದ ದೂರ ಉಳಿದರು. ಮೈಸೂರಿನಲ್ಲಿ ವಕೀಲರ ಸಾಮಾನ್ಯ ಸಭೆಯಲ್ಲಿ ಕೆಲವು ವಕೀಲರು ತಮ್ಮ ಅಭಿಪ್ರಾಯಗಳನ್ನು ಹೇಳಿದಾಗ ಹೊಡೆಯೋಕೆ ಬಂದಿದ್ದಾರೆ. ಅದು ಗೂಂಡಾಗಿರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಇದೇ ಕಾರಣಕ್ಕಾಗಿ ಪ್ರತಿಭಟನೆ ನಡೆಸಿದರು. ಜತೆಗೆ ಸಿದ್ದರಾಮಯ್ಯ ಅವರು ವಕೀಲರ ಬಹಿರಂಗ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ಫಲಕ ಹಿಡಿದ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮೈಸೂರು ಜಿಲ್ಲಾ ವಕೀಲರ ಸಂಘ ನಿರ್ಧರಿಸಿತ್ತು. ಇದರೊಟ್ಟಿಗೆ ದೇಶದ್ರೋಹದ ಆರೋಪ ಹಿನ್ನೆಲೆ ಹಿಂದಿನಿಂದ ನಡೆದು ಬಂದ ಸಂಪ್ರದಾಯವನ್ನು ಸಂಘ ಪಾಲಿಸಿತ್ತು. ಈ ಬಗ್ಗೆ ಸಿದ್ದರಾಮಯ್ಯರಿಗೆ ಕೆಲವು ವಕೀಲರಿಂದ ತಪ್ಪು ಮಾಹಿತಿ ಲಭಿಸಿತ್ತು. ‌ ಈ ಬಗ್ಗೆ ಮಾಹಿತಿ ಪಡೆಯದೆ ಮೈಸೂರು ವಕೀಲರ ವಿರುದ್ಧ ಸಿದ್ದರಾಮಯ್ಯ ಮಾತನಾಡಿದ್ದರು. ಸಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ