ಆ್ಯಪ್ನಗರ

ಚಾಮುಂಡೇಶ್ವರಿ ಕ್ಷೇತ್ರ: 5.42 ಲಕ್ಷ ರೂ. ವಶ

ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಮೂಲಕ ಹೈ ವೋಲ್ಟೇಜ್‌ ಕ್ಷೇತ್ರವಾಗಿರುವ ಚಾಮುಂಡೇಶ್ವರಿ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನದಲ್ಲಿ ದಾಖಲೆ ಇಲ್ಲದೆ ಹಣ ಸಾಗಣೆಗೆ ಸಂಬಂಧಿಸಿದಂತೆ ಒಟ್ಟು 5.42 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

Vijaya Karnataka 4 May 2018, 5:00 am

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಮೂಲಕ ಹೈ ವೋಲ್ಟೇಜ್‌ ಕ್ಷೇತ್ರವಾಗಿರುವ ಚಾಮುಂಡೇಶ್ವರಿ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನದಲ್ಲಿ ದಾಖಲೆ ಇಲ್ಲದೆ ಹಣ ಸಾಗಣೆಗೆ ಸಂಬಂಧಿಸಿದಂತೆ ಒಟ್ಟು 5.42 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಮೈಸೂರು-ಹುಣಸೂರು ರಸ್ತೆಯಲ್ಲಿರುವ ಮೈದನಹಳ್ಳಿಯಲ್ಲಿ ಚುನಾವಣಾ ತಪಾಸಣಾ ಸಿಬ್ಬಂದಿ ವಾಹನ ತಪಾಸಣೆ ಮಾಡಿದ ಸಂದರ್ಭ ವಾಹನಗಳಲ್ಲಿ ಸೂಕ್ತ ದಾಖಲೆ ಇಲ್ಲದೆ ಹಣ ಸಾಗಣೆ ಮಾಡುತ್ತಿರುವುದು ಕಂಡು ಬಂತು. ಪ್ರತ್ಯೇಕ ಎರಡು ಪ್ರಕರಣಗಳಲ್ಲಿ 3.06 ಲಕ್ಷ ರೂ. ಹಾಗೂ 2.36 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಯಿತು. ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾಧಿಕಾರಿ ಬಿ.ವೆಂಕಟೇಶ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ