ಆ್ಯಪ್ನಗರ

ರಾಜ್ಯದಲ್ಲಿ 30 ಹೊಸ ಸಕ್ಕರೆ ಕಾರ್ಖಾನೆ

ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಬೇಡಿಕೆಯ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ 60 ಕಾರ್ಖಾನೆಗಳ ಜತೆಗೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೂತನವಾಗಿ 30 ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭಗೊಳ್ಳಲಿವೆ ಎಂದು ಸಕ್ಕರೆ ನಿರ್ದೇಶನಾಲಯದ ನಿರ್ದೇಶಕ ಡಾ.ಅಜಯ್‌ ನಾಗಭೂಷಣ್‌ ಹೇಳಿದರು.

Vijaya Karnataka 2 Jun 2018, 7:59 am
ಮೈಸೂರು: ಕಬ್ಬು ಬೆಳೆಗಾರರಿಂದ ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಬೇಡಿಕೆಯ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ 60 ಕಾರ್ಖಾನೆಗಳ ಜತೆಗೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೂತನವಾಗಿ 30 ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭಗೊಳ್ಳಲಿವೆ ಎಂದು ಸಕ್ಕರೆ ನಿರ್ದೇಶನಾಲಯದ ನಿರ್ದೇಶಕ ಡಾ.ಅಜಯ್‌ ನಾಗಭೂಷಣ್‌ ಹೇಳಿದರು.
Vijaya Karnataka Web mysuru sugarcane corp sugar factory new factory start
ರಾಜ್ಯದಲ್ಲಿ 30 ಹೊಸ ಸಕ್ಕರೆ ಕಾರ್ಖಾನೆ


ಕಬ್ಬು ತಳಿ ಸಂಸ್ಥೆ, ಕೃಷಿ ವಿಶ್ವ ವಿದ್ಯಾಲಯ, ಭಾರತ ರತ್ನ ಸರ್‌.ಎಂ.ವಿಶ್ವೇಶ್ವರಯ್ಯ ಕಬ್ಬು ಸಂಸ್ಥೆ ಹಾಗೂ ದಕ್ಷಿಣ ಕರ್ನಾಟಕದ ಸಕ್ಕರೆ ಕಾರ್ಖಾನೆಗಳ ಸಹಯೋಗದಲ್ಲಿ ಮಾನಸ ಗಂಗೋತ್ರಿಯ ರಾಣಿಬಹದ್ದೂರ್‌ ಸಭಾಂಗಣದಲ್ಲಿ ದಕ್ಷಿಣ ಕರ್ನಾಟಕದ ಕಬ್ಬು ತಳಿ ಸಂಶೋಧನೆ ಮತ್ತು ಅಭಿವೃದ್ಧಿ ನಿರತರ 21ನೇ ಸಮ್ಮೇಳನದಲ್ಲಿ ಮಾತನಾಡಿದರು.

''ಸಕ್ಕರೆ ಬೇಡಿಕೆಯೊಂದಿಗೆ, ಕಬ್ಬು ಬೆಳೆಗಾರರಿಂದಲೂ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಬೇಡಿಕೆ ಇದೆ. ಹೀಗಾಗಿ 30 ಹೊಸ ಕಾರ್ಖಾನೆಗಳನ್ನು ಪ್ರಾರಂಭಿಸಲು ಸರಕಾರ ಅನುಮತಿ ನೀಡಿದೆ. ಇದರಿಂದ ಮುಂದಿನ ದಿನಗಳಲ್ಲಿ ಕಬ್ಬು ಬೆಳೆಗಾರಿಗೆ ನ್ಯಾಯೋಚಿತ ಬೆಲೆ ದೊರೆಯುವ ನಿರೀಕ್ಷೆ ಇದೆ,'' ಎಂದರು.

ಕಬ್ಬು ತಳಿ ಸಂಸ್ಥೆಯ ನಿರ್ದೇಶಕ ಡಾ.ಭಕ್ಷಿರಾಮ್‌ ಮಾತನಾಡಿ, ''ಕರ್ನಾಟಕದಲ್ಲಿ ಕಬ್ಬು ಬೆಳೆಯುವ ಪ್ರದೇಶದಲ್ಲಿ ಶೇ. 5ಕ್ಕಿಂತ ಕಡಿಮೆ ಪ್ರದೇಶ ಹನಿ ನೀರಾವರಿಗೆ ಒಳಪಟ್ಟಿದೆ. ತಂತ್ರಜ್ಞಾನ ಮುಂದುವರಿದಿದೆ. ಅದಕ್ಕಾಗಿ ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತರಿಗೆ ತಿಳಿವಳಿಕೆ ನೀಡುವುದು ಅವಶ್ಯವಾಗಿದೆ,'' ಎಂದು ತಿಳಿಸಿದರು.

''ಕಬ್ಬು ಕಟಾವಿಗೆ ಕೂಲಿ ಕಾರ್ಮಿಕರ ಕೊರತೆ ಇದೆ. ಇದಕ್ಕಾಗಿ ಯಾಂತ್ರಿಕ ಕಟಾವು ಮಾಡುವುದು ಅಗತ್ಯ. ಇದರಿಂದ ಕಬ್ಬು ಶೀಘ್ರ ಕಟಾವು ಆಗುವುದರ ಜತೆಗೆ ಸಕ್ಕರೆ ಉತ್ಪಾದನೆಯು ಹೆಚ್ಚಾಗುವುದು. ಈ ಬಗ್ಗೆ ಕಾರ್ಖಾನೆಯವರು ಗಮನಹರಿಸಿ,'' ಎಂದು ಸಲಹೆ ನೀಡಿದರು.

ಕೃಷಿ ಇಲಾಖೆಯ ಮೈಸೂರು ಜಿಲ್ಲೆ ಜಂಟಿ ನಿರ್ದೇಶಕ ಸೋಮಸುಂದರ್‌ ಮಾತನಾಡಿ, ''ಜಿಲ್ಲೆಯಲ್ಲಿ ಕಾವೇರಿ, ಕಬಿನಿ, ಹಾರಂಗಿ ಹಾಗೂ ಹೇಮಾವತಿಯಿಂದ ನೀರು ಲಭ್ಯವಿದ್ದರೂ ಕಬ್ಬು ಬೆಳೆಯಲು ಸಾಕಾಗುತ್ತಿಲ್ಲ. ಹೀಗಾಗಿ 1.14 ಲಕ್ಷ ಹೆಕ್ಟೇರ್‌ ಬೆಳೆಯಲ್ಲಿ 42 ಸಾವಿರ ಹೆಕ್ಟೇರ್‌ ಹಾನಿಯಾಗಿದೆ,'' ಎಂದು ತಿಳಿಸಿದರು.

ಬೆಳಗಾವಿಯ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ನಿರ್ದೇಶಕ ಡಾ.ಆರ್‌.ಬಿ.ಕಂಡಗಾವೆ, ಕೊಪ್ಪದ ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಪಿ.ಜಿ.ಕೆ.ದತ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ