ಆ್ಯಪ್ನಗರ

ಬೆತ್ತಲೆ ಮೆರವಣಿಗೆ ಪ್ರಕರಣ: ಯುವಕನ ಆರೋಗ್ಯ ವಿಚಾರಿಸಿದ ಆಯೋಗ

ಗುಂಡ್ಲುಪೇಟೆ ಬಳಿ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಪರಿಶಿಷ್ಟ ಜಾತಿ ಆಯೋಗದ ಉಪಾಧ್ಯಕ್ಷ ಮುರುಗನ್‌, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಹೇಳಿದ್ದಾರೆ.

Vijaya Karnataka 18 Jun 2019, 5:00 am
ಮೈಸೂರು: ಗುಂಡ್ಲುಪೇಟೆ ಬಳಿ ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಪರಿಶಿಷ್ಟ ಜಾತಿ ಆಯೋಗದ ಉಪಾಧ್ಯಕ್ಷ ಮುರುಗನ್‌, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಹೇಳಿದ್ದಾರೆ.
Vijaya Karnataka Web naked parade case commission to inquire into health of youth
ಬೆತ್ತಲೆ ಮೆರವಣಿಗೆ ಪ್ರಕರಣ: ಯುವಕನ ಆರೋಗ್ಯ ವಿಚಾರಿಸಿದ ಆಯೋಗ


ಯುವಕ ಚಿಕಿತ್ಸೆ ಪಡೆಯುತ್ತಿರುವ ನಗರದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಯುವಕನ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ''ಈ ಕೃತ್ಯ ಖಂಡನೀಯ. ಇದರಿಂದ ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ದೌರ್ಜನ್ಯ ನಡೆಸಿದ ಹಾಗೂ ಕುಟುಂಬ, ಸಮುದಾಯಕ್ಕೆ ಅವಮಾನ ಮಾಡಿದ ವ್ಯಕ್ತಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣದಲ್ಲಿ ದೂರು ದಾಖಲಿಸಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧವೂ ಅಟ್ರಾಸಿಟಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಲಾಗಿದೆ. ವಿದ್ಯಾವಂತನಾಗಿರುವ ಯುವಕ ಯುಪಿಎಸ್‌ಸಿ ಪರೀಕ್ಷೆ ಬರೆಯಲು ತಯಾರಾದ್ದು, ಆತ ಬುದ್ಧಿಮಾಂದ್ಯನಲ್ಲ. ಅಧಿಕಾರಿಗಳು ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು. ಆಯೋಗದ ವತಿಯಿಂದ ಯುವಕನ ಕುಟುಂಬಕ್ಕೆ 25 ಸಾವಿರ ರೂ. ಚೆಕ್‌ ನೀಡಿದರು.

ಈ ಸಂದರ್ಭ ಚಾಮರಾಜನಗರ ಅಪರ ಜಿಲ್ಲಾಧಿಕಾರಿ ಸಿ.ಎಲ್‌ ಆನಂದ್‌, ಮೈಸೂರು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿಂದ್ಯಾ, ಚಾಮರಾಜನಗರ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್‌, ಉಪವಿಭಾಗಾಧಿಕಾರಿ ಶಿವೇಗೌಡ, ಚಾಮರಾಜ ನಗರ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕಿ ಅನಿತಾ, ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ