ಆ್ಯಪ್ನಗರ

ಮೈಸೂರು: ಕುತೂಹಲ ಮೂಡಿಸಿದ ನಿಖಿಲ್‌ ಕುಮಾರಸ್ವಾಮಿ, ಜಿಟಿಡಿ ಭೇಟಿ

ಶಾಸಕ ಜಿ.ಟಿ.ದೇವೇಗೌಡ ಅವರನ್ನು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಮೈಸೂರಿನ ನಿವಾಸದಲ್ಲಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Vijaya Karnataka Web 5 Dec 2020, 9:43 am
ಮೈಸೂರು: ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ನಿಖಿಲ್‌ ಕುಮಾರಸ್ವಾಮಿ ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿ, ಜಿ.ಟಿ.ದೇವೇಗೌಡ ಅವರನ್ನು ನಿವಾಸದಲ್ಲಿ ಭೇಟಿಯಾದರು.
Vijaya Karnataka Web nikhil


ಸಾಕಷ್ಟು ಹೊತ್ತು ಅವರಿಬ್ಬರೂ ಮಾತುಕತೆ ನಡೆಸಿದರು. ಈ ಸಂದರ್ಭ ಜಿ.ಟಿ.ದೇವೇಗೌಡ ರ ಪುತ್ರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಕೇಂದ್ರ ಬ್ಯಾಂಕ್‌ ಅಧ್ಯಕ್ಷ ಜಿ.ಡಿ.ಹರೀಶ್‌ಗೌಡ ಇದ್ದರು. ಬಳಿಕ ವಿಜಯ ಕರ್ನಾಟಕದೊಂದಿಗೆ ಮಾತನಾಡಿದ ಹರೀಶ್‌ಗೌಡ, ''ನಾನು ಹಾಗೂ ನಿಖಿಲ್‌ ಕುಮಾರಸ್ವಾಮಿ ಸ್ನೇಹಿತರು. ಅವರು ನಮ್ಮ ಮನೆಗೆ ಸ್ನೇಹಿತರಾಗಿ ಭೇಟಿ ನೀಡಿದ್ದಾರೆ. ಈ ಸಂದರ್ಭ ತಂದೆಯವರೊಂದಿಗೂ ಚರ್ಚೆ ನಡೆಸಿದ್ದಾರೆ. ಆದರೆ, ಇದರಲ್ಲಿ ಯಾವುದೇ ರಾಜಕೀಯ ವಿಷಯಗಳ ಕುರಿತು ಚರ್ಚೆಯಾಗಲಿಲ್ಲ'' ಎಂದು ಹೇಳಿದರು.

ಜಿ.ಟಿ.ದೇವೇಗೌಡರು ಜೆಡಿಎಸ್‌ ಮುಖಂಡರೊಂದಿಗೆ ಮುನಿಸಿಕೊಂಡು ಪಕ್ಷದಲ್ಲಿ ತಟಸ್ಥರಾಗಿದ್ದಾರೆ. ಒಂದು ಹಂತದಲ್ಲಿಅವರು ಪಕ್ಷ ತೊರೆಯುವ ಲಕ್ಷಣಗಳು ಕಾಣಿಸಿದರೂ, ಜೆಡಿಎಸ್‌ನಲ್ಲಿಯೇ ತಾಂತ್ರಿಕವಾಗಿ ಇರುವುದಾಗಿ ಹೇಳಿಕೊಂಡಿದ್ದರು. ಬಿಜೆಪಿ ಸರಕಾರದ ಸಚಿವರೊಂದಿಗೆ ಒಡನಾಟ ಹೆಚ್ಚಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ಕುಮಾರಸ್ವಾಮಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಜಿ.ಟಿ.ದೇವೇಗೌಡರ ಬಗ್ಗೆ ಒಳ್ಳೆಯ ಮಾತು ಗಳನ್ನು ಹೇಳಿದ್ದರು. ಅವರು ಜೆಡಿಎಸ್‌ನಲ್ಲಿಯೇ ಇದ್ದು, ಅವರೇ ಕಾರ್ಯಕರ್ತರನ್ನು ನೋಡಿಕೊಳ್ಳಲಿದ್ದಾರೆ ಎಂದು ಹೇಳಿದ್ದರು. ಈ ಹಂತದಲ್ಲಿ ನಿಖಿಲ್‌ ಕುಮಾರಸ್ವಾಮಿ ಭೇಟಿ ಮಾಡಿ ಚರ್ಚೆ ನಡೆಸಿರುವುದು ಇನ್ನಷ್ಟು ಕುತೂಹಲ ಮೂಡುವಂತೆ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ