ಆ್ಯಪ್ನಗರ

ಸಂವಿಧಾನ ಬದಲಾವಣೆ ಮಾಡಲು ಮುಂದಾದರೆ ರಕ್ತಕ್ರಾಂತಿ ಆಗುತ್ತೆ; ಸಿದ್ದರಾಮಯ್ಯ ಎಚ್ಚರಿಕೆ

ಮಾಜಿ ಮೇಯರ್ ನಾರಾಯಣ್‌ರವರ ಆತ್ಮಚರಿತ್ರೆ ಕುರಿತು ‘ಪೌರ ಬಂಧು’ ಕೃತಿಯನ್ನ ಬಿಡುಗಡೆಗೊಳಿಸಿ ಅವರು ಮಾತನಾಡಿದ್ರು. ನಾನು ಅನೇಕ ಬಾರಿ ಹೇಳಿದ್ದೇನೆ. ಸಂವಿಧಾನ ಬದಲಾವಣೆ ಆದರೆ ರಕ್ತ ಕ್ರಾಂತಿ ಆಗುತ್ತೆ ಅಂತ ಎಚ್ಚರಿಕೆ ನೀಡಿದ್ದೇನೆ. ಸಂವಿಧಾನ ಕೆಟ್ಟವರ ಕೈಯಲ್ಲಿ ಇದ್ದಾಗ ಕೆಟ್ಟದಾಗುತ್ತೆ ಎಂದು ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ರು

guest Srinidhi-H-S | Lipi 28 Nov 2021, 1:26 pm
ಮೈಸೂರು: ಪೌರ ಕಾರ್ಮಿಕರು ಸೇರಿದಂತೆ ಸಮಾಜದ ಹಿಂದುಳಿದ ಜನರಿಗೆ ಸಾಮಾಜಿಕ ಆರ್ಥಿಕ ಸ್ವಾತಂತ್ರ್ಯ ಸಿಗಬೇಕು. ಮತ್ತೆ ಹಣ ಇರುವವರ ಬಳಿ ಅಧಿಕಾರ ಹೋದ್ರೆ ಮತ್ತೆ ಶೋಷಣೆ ಪ್ರಾರಂಭ ಆಗುತ್ತೆ. ಹಾಗಾಗಿ ಎಲ್ಲಾ ಯುವಕರು ಸಂವಿಧಾನ ಓದಬೇಕು. ಒಂದು ವೇಳೆ ಭಾರತದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಹುಟ್ಟದಿದ್ರೆ, ಸಂವಿಧಾನ ಕೊಡದಿದ್ರೆ ಸಾಮಾಜಿಕ ನ್ಯಾಯ ಸಿಕ್ತಿತ್ತಾ? ಅಂತಹ ಸಂವಿಧಾನವನ್ನ ಬದಲಾವಣೆ ಮಾಡ್ತೀವಿ ಅನ್ನೋದು ಎಷ್ಟು ಸರಿ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶಿಸಿದ್ರು.
Vijaya Karnataka Web Siddaramaiah


ಮೈಸೂರಲ್ಲಿ ಮಾಜಿ ಮೇಯರ್ ನಾರಾಯಣ್‌ರವರ ಆತ್ಮಚರಿತ್ರೆ ಕುರಿತು ‘ಪೌರ ಬಂಧು’ ಕೃತಿಯನ್ನ ಬಿಡುಗಡೆಗೊಳಿಸಿ ಅವರು ಮಾತನಾಡಿದ್ರು. ನಾನು ಅನೇಕ ಬಾರಿ ಹೇಳಿದ್ದೇನೆ. ಸಂವಿಧಾನ ಬದಲಾವಣೆ ಆದರೆ ರಕ್ತ ಕ್ರಾಂತಿ ಆಗುತ್ತೆ ಅಂತ ಎಚ್ಚರಿಕೆ ನೀಡಿದ್ದೇನೆ. ಸಂವಿಧಾನ ಕೆಟ್ಟವರ ಕೈಯಲ್ಲಿ ಇದ್ದಾಗ ಕೆಟ್ಟದಾಗುತ್ತೆ ಎಂದು ಸಿದ್ಧರಾಮಯ್ಯ ಹೇಳಿದ್ರು. ನಾರಾಯಣ್ ಪೌರಕಾರ್ಮಿಕ ವರ್ಗಕ್ಕೆ ಸೇರಿದವರು. ಅವರ ತಂದೆ, ತಾಯಿ ಪೌರಕಾರ್ಮಿಕರಾಗಿದ್ದರು. ನಾರಾಯಣ್ ಪೌರಕಾರ್ಮಿಕರ ಅಭಿವೃದ್ಧಿಗಾಗಿ ಹೋರಾಟ ಮಾಡ್ತಾ ಬಂದಿದ್ದಾರೆ. ನನಗೆ ಮತ್ತು ಪೌರಕಾರ್ಮಿಕರ ನಡುವೆ ಸಂಬಂಧ ಬೆಳೆಯಲು ನಾರಾಯಣ್ ಕಾರಣ. ನನ್ನ ಭೇಟಿಯಾದಾಗೆಲ್ಲಾ ಪೌರಕಾರ್ಮಿಕರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತಿದ್ರು. ಬಹುಮತ ಇಲ್ಲದಿದ್ರೂ ಬಹಳಷ್ಟು ಜನ ಕಾರ್ಪೋರೇಟರ್‌ಗಳು ಬೆಂಬಲಿಸಿ ಮೇಯರ್ ಮಾಡಿದ್ರು. ಆಗ ನಮ್ಮ ಸರ್ಕಾರ ಅಧಿಕಾರದಲ್ಲಿರಲಿಲ್ಲ. ನಾನು ಹಠ ಮಾಡಿ ನಾರಾಯಣ್ ಅವರ ಮೇಯರ್ ಮಾಡಿದೆ. ಕಟ್ಟಕಡೆಯ ಮನುಷ್ಯನನ್ನು ಮೊದಲ ಪ್ರಜೆ ಮಾಡಿದೆ. ಅವರೂ ಆ ಜವಾಬ್ದಾರಿಯನ್ನ ಬಳಸಿಕೊಂಡು ಪೌರಕಾರ್ಮಿಕರನ್ನ ಸಂಘಟಿಸಿ, ಸಮಸ್ಯೆ ಬಗೆಹರಿಸಲು ಮುಂದಾದರು. ಅವರು ಸಾರ್ವಜನಿಕ ಬದುಕಿನಲ್ಲಿ ಮರೆಯಲಾಗದ ಹೆಜ್ಜೆ ಗುರುತು ಬಿಟ್ಟಿದ್ದಾರೆ ಎಂದರು.
ಪೌರ ಕಾರ್ಮಿಕರಿಗೆ ಸಾಮಾಜಿಕ ಸ್ವಾತಂತ್ರ್ಯ ಅಗತ್ಯ: ಸಿದ್ದರಾಮಯ್ಯ
ಕೆಲವೊಂದು ಸಾರಿ ಚಳುವಳಿ ಮಾಡ್ಬೇಡ ಅಂದ್ರೂ ಮಾಡಿದ್ದರು ಎಂದ ಸಿದ್ದರಾಮಯ್ಯ, ಪೌರಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡೋದು ಮುಖ್ಯ ಅಂತಿದ್ದರು. ಪೌರಕಾರ್ಮಿಕರ ಅಭಿವೃದ್ಧಿ ನಿಗಮ ರಚನೆಗೆ ಒತ್ತಾಯ ಮಾಡಿ ಮಾಡಿಸಿದ್ದರು. ಪೌರಕಾರ್ಮಿಕರನ್ನ ಸಿಂಗಾಪೂರ್‌ಗೆ ಕಳಿಸುವ ಕೆಲಸ ಮಾಡಿದ್ದೆ. ಇದಕ್ಕೆ ಕೆಲ ಐಎಎಸ್ ಅಧಿಕಾರಿಗಳು ವಿರೋಧ ಮಾಡಿದ್ದರು. ನಾರಾಯಣ ದಸರಾದಲ್ಲಿ ಕುದುರೆ ಮೇಲೆ ಕೂರು ಅಂದಿದ್ದೆ. ಅವರು ಹೆದರಿಕೊಂಡು ಬೇಡ ಅಂತಿದ್ದರು. ನಾನು ಅವರಿಗೆ ಧೈರ್ಯ ಹೇಳಿ ಕುದುರೆ ಸವಾರಿ ಮಾಡಿಸಿದ್ದೆ. ಒಬ್ಬ ಹಿಂದುಳಿದ ವರ್ಗದ ವ್ಯಕ್ತಿ ಮೇಯರ್ ಆಗಿ, ಕುದುರೆ ಮೇಲೆ ಕೂತು ದಸರಾದಲ್ಲಿ ಮೆರವಣಿಗೆ ಮಾಡಿಸಿದ್ದು ನನಗೆ ಖುಷಿ ಕೊಟ್ಟಿದ್ದು ಎಂದು ಸಿದ್ಧರಾಮಯ್ಯ ಸ್ಮರಿಸಿದರು
ಕಾಂಗ್ರೆಸ್‌ಗೆ ತೊಂದರೆ ಮಾಡಲು ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ: ಜಿ. ಪರಮೇಶ್ವರ್
ಮೈಸೂರು ವಿಶ್ವವಿದ್ಯಾನಿಲಯದ ಎನ್ ರಾಚಯ್ಯ ಅಧ್ಯಯನ ಪೀಠದಿಂದ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಸಮಾರಂಭ ಆಯೋಜನೆ ಮಾಡಲಾಗಿತ್ತು. ದೀಪಾ ಬೆಳಗಿಸುವ ಮೂಲಕ ಮಾಜಿ ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ಕೃತಿ ಲೋಕಾರ್ಪಣೆ ಮಾಡಿದರು. ನಂತರ ಸಮಕಾಲೀನ ಕರ್ನಾಟಕದಲ್ಲಿ ಪೌರಕಾರ್ಮಿಕರ ಸ್ಥಿತಿಗತಿಗಳು ವಿಚಾರ ಸಂಕಿರಣ ನಡೆಯಿತು. ಕಾರ್ಯಕ್ರಮದಲ್ಲಿ ಕುಲಪತಿ ಪ್ರೋ ಹೇಮಂತ್ ಕುಮಾರ್, ಶಾಸಕ ನಾಗೇಂದ್ರ, ಮಾಜಿ ಸಂಸದ ಧ್ರುವನಾರಾಯಣ್, ಮಾಜಿ ಮೇಯರ್ ನಾರಾಯಣ್ ಸೇರಿ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ