ಆ್ಯಪ್ನಗರ

ಖಾಸಗಿ ಬಸ್‌ ಪಲ್ಟಿ: 20ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

Vijaya Karnataka 25 Jul 2018, 5:00 am
ತಿ.ನರಸೀಪುರ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್‌ ಪಲ್ಟಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
Vijaya Karnataka Web private bus pulty more than 20 injured
ಖಾಸಗಿ ಬಸ್‌ ಪಲ್ಟಿ: 20ಕ್ಕೂ ಹೆಚ್ಚು ಮಂದಿಗೆ ಗಾಯ


ತಿ.ನರಸೀಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 212ರ ಇಂಡುವಾಳ ಗ್ರಾಮದ ತಿರುವು ಬಳಿ ಮಂಗಳವಾರ ಬೆಳಗ್ಗೆ 9ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ ಹೊಡೆದಿದೆ. ಬಸ್‌ ಮೈಸೂರಿನಿಂದ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕು ಒಡೆಯರ ಪಾಳ್ಯಕ್ಕೆ ತೆರಳುತ್ತಿತ್ತು. ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಿ.ನರಸೀಪುರ ಸಾರ್ವಜನಿಕ ಆಸ್ವತ್ರೆ ಹಾಗೂ ಮೈಸೂರಿನ ಕೆ.ಆರ್‌.ಆಸ್ವತ್ರೆಗೆ ದಾಖಲಿಸಲಾಗಿದೆ.

ಎಚ್‌.ಡಿ.ಕೋಟೆ ತಾಲೂಕು ಚಂದಪುರಹುಂಡಿ ಗ್ರಾಮದ ಎಂ.ಮಹೇಶ್‌ ನಾಯಕ್‌, ಮೈಸೂರು ನಿವಾಸಿ ನಂಜಪ್ಪ ಹಾಗೂ ಮಂಜುಳಾ ಎಂಬುವವರಿಗೆ ಗಾಯವಾಗಿದ್ದು, ತಿ.ನರಸೀಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಗಾಯಾಳುಗಳನ್ನು ಮೈಸೂರಿನ ಕೆ.ಆರ್‌.ಆಸ್ವತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಸ್ಥಳಕ್ಕೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಮನೋಜ್‌ ಕುಮಾರ್‌, ಇನ್ಸ್‌ಪೆಕ್ಟರ್‌ ಆನಂದ್‌ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲು ನೆರವಾಗಿದ್ದಾರೆ. ಈ ಸಂಬಂಧ ತಿ.ನರಸೀಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ