ಆ್ಯಪ್ನಗರ

ಕಾರ್ಮಿಕರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ವಿನ್ಯಾಸ್‌ ಇನ್ನೋವೇಟಿವ್‌ ಟೆಕ್ನಾಲಜೀಸ್‌ ಕಂಪೆನಿಯು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ನ ಸದಸ್ಯರಾಗಿರುವ 90 ಮಂದಿ ಕಾರ್ಮಿಕರನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ನ ಸದಸ್ಯರು ಪ್ರತಿಭಟನೆ ನಡೆಸಿದರು.

Vijaya Karnataka 11 Oct 2018, 5:00 am
ಮೈಸೂರು: ವಿನ್ಯಾಸ್‌ ಇನ್ನೋವೇಟಿವ್‌ ಟೆಕ್ನಾಲಜೀಸ್‌ ಕಂಪೆನಿಯು ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ನ ಸದಸ್ಯರಾಗಿರುವ 90 ಮಂದಿ ಕಾರ್ಮಿಕರನ್ನು ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ನ ಸದಸ್ಯರು ಪ್ರತಿಭಟನೆ ನಡೆಸಿದರು.
Vijaya Karnataka Web MYR-MYS10RAVI01


ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ಕಂಪೆನಿ ವಿರುದ್ಧ ಘೋಷಣೆ ಕೂಗಿದರು.

ಆಂಧ್ರಪ್ರದೇಶದಲ್ಲಿರುವ ತಿರುಪತಿಯಿಂದ ಸುಮಾರು 20ಕಿ.ಮೀ ದೂರದ ವಿಕೃತಮಾಲ ಎನ್ನುವಂತಹ ಸ್ಥಳಕ್ಕೆ ಕಾರ್ಮಿಕರನ್ನು ವರ್ಗಾವಣೆ ಮಾಡಲಾಗಿದ್ದು, ಕಾರ್ಮಿಕರಿಗೆ ಕೆಲಸ ಮಾಡಲು ಸೂಕ್ತವಾದ ವಾತಾವರಣವನ್ನು ಕಲ್ಪಿಸಿಕೊಟ್ಟಿಲ್ಲ. ಸುಮಾರು 3 ತಿಂಗಳಿಂದ ಸಂಬಳವನ್ನೂ ನೀಡಿಲ್ಲ. ಈ ಕುರಿತು ಹಲವು ಬಾರಿ ಮನವಿ ಮಾಡಿದ್ದೇವೆಯಾದರೂ, ಅದಕ್ಕೂ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಮಧ್ಯಪ್ರವೇಶಿಸಬೇಕು. ಮಹಿಳೆಯರು ಒಳಗೊಂಡಂತೆ ಕಾರ್ಮಿಕರನ್ನು ಅಮಾನುಷವಾಗಿ ನಡೆದುಕೊಳ್ಳುತ್ತಿರುವ ವಿನ್ಯಾಸ್‌ ಆಡಳಿತ ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳಬೇಕು. ತೊಂದರೆಗೆ ಒಳಗಾಗಿರುವ ಕಾರ್ಮಿಕರಿಗೆ ಸರಕಾರವೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾರ್ಮಿಕರಾದ ಎಲ್‌.ಜಯ, ಜಿ.ಜಯರಾಮ್‌, ಸತೀಶ್‌ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ