ಆ್ಯಪ್ನಗರ

ಕ್ಷುಲ್ಲಕ ವಿಚಾರಕ್ಕೆ ಜಗಳ: ವ್ಯಕ್ತಿಯ ಕೊಲೆ

ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬರು ಕೊಲೆಗೀಡಾಗಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ಗೌರಿಶಂಕರನಗರ ಬಡಾವಣೆಯ ಮೈದಾನದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

Vijaya Karnataka 30 Jun 2019, 5:00 am
ಮೈಸೂರು: ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬರು ಕೊಲೆಗೀಡಾಗಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ಗೌರಿಶಂಕರನಗರ ಬಡಾವಣೆಯ ಮೈದಾನದಲ್ಲಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ.
Vijaya Karnataka Web quarrel to the trivial matter the murder of a person
ಕ್ಷುಲ್ಲಕ ವಿಚಾರಕ್ಕೆ ಜಗಳ: ವ್ಯಕ್ತಿಯ ಕೊಲೆ


ಗುಂಡೂರಾವ್‌ನಗರದ ನಿವಾಸಿ ಸುನೀಲ್‌ ಕುಮಾರ್‌(29) ಮೃತರು. ದೇವರಾಜ ಮಾರುಕಟ್ಟೆಯಲ್ಲಿ ಕುಂಕುಮ ವ್ಯಾಪಾರ ಮಾಡಿಕೊಂಡಿದ್ದ ಸುನೀಲ್‌ಗೆ ವಿವಾಹವಾಗಿದ್ದು, ಪತ್ನಿ ಮತ್ತು ನಾಲ್ಕು ವರ್ಷದ ಪುತ್ರನಿದ್ದಾನೆ.

ಶನಿವಾರ ಬೆಳಗ್ಗೆ ಮೈಸೂರು-ನಂಜನಗೂಡು ರಸ್ತೆಯಲ್ಲಿ ಗಣಪತಿ ಆಶ್ರಮದ ಸಮೀಪ ನಡೆದ ಅಪಘಾತದಲ್ಲಿ ನಂಜನಗೂಡು ಕಡೆಯಿಂದ ದ್ವಿಚಕ್ರವಾಹನದಲ್ಲಿ ಮೈಸೂರಿಗೆ ಬರುತ್ತಿದ್ದ ವ್ಯಕ್ತಿ ಗಾಯಗೊಂಡಿದ್ದು, ಆತನ ಬಳಿ ಇದ್ದ ಮೊಬೈಲ್‌ ಮತ್ತು ಹಣ ರಸ್ತೆಯಲ್ಲಿ ಬಿದ್ದು ಕಳವಾಗಿತ್ತು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಸುನೀಲ್‌ ಕುಮಾರ್‌, ವೃದ್ಧರೊಬ್ಬರ ಮೇಲೆ ಅನುಮಾನ ವ್ಯಕ್ತಪಡಿಸಿ ನೀವೇ ಕದ್ದಿದ್ದು, ಗಾಯಗೊಂಡವರ ಹಣ ವಾಪಸ್‌ ನೀಡಿ ಎಂದು ಗಲಾಟೆ ಮಾಡಿದ್ದರು. ಈ ವಿಷಯ ತಿಳಿದ ವೃದ್ಧನ ಪುತ್ರ ಪ್ರಮೋದ್‌ ಅಲಿಯಾಸ್‌ ಬೆಟ್ಟ ಕೋಪಗೊಂಡು, ಸ್ನೇಹಿತರೊಂದಿಗೆ ಗುಂಪು ಕಟ್ಟುಕೊಂಡು ಬಂದು ಮೈದಾನದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ಸುನೀಲ್‌ ಕುಮಾರ್‌ಗೆ ಡ್ರಾಗರ್‌ನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಕೆ.ಟಿ.ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆ ಆರೋಪಿಗಳ ಬಂಧನಕ್ಕೆ ತಂಡ ರಚಿಸಲಾಗಿದ್ದು, ಕೂಡಲೇ ಎಲ್ಲರನ್ನು ಬಂಧಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ. ಮೃತ ಸುನೀಲ್‌ ಕುಮಾರ್‌ ಈ ಹಿಂದೆ ಸರಸ್ವತಿಪುರಂ ಅಗ್ನಿಶಾಮಕ ಠಾಣೆಯ ಎದುರು ನಡೆದ ಕೊಲೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಎಂದು ತಿಳಿದು ಬಂದಿದೆ.

ಈ ಸಂಬಂಧ ಕೆ.ಆರ್‌. ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ