ಆ್ಯಪ್ನಗರ

ರೋಹಿಣಿ ಸಿಂಧೂರಿ ಐಎಎಸ್​ ಪಾಸ್ ಮಾಡಿದ್ದಾರೆ ಎಂಬುದೇ ಅನುಮಾನ: ರಘು ಆಚಾರ್

ರೋಹಿಣಿ ಸಿಂಧೂರಿ ಐಎಎಸ್ ಪಾಸ್‌ ಮಾಡಿದ್ದಾರಾ? ಇಲ್ಲವಾ? ಎಂಬುದೇ ಅನುಮಾನ. ಅವರು ನಿಜವಾಗಿಯೂ ಸ್ವಂತ ಪರಿಶ್ರಮದಿಂದ ಪಾಸ್ ಆಗಿದ್ದಾರಾ? ಎಂಬುದು ಖಚಿತವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ.

Vijaya Karnataka Web 27 Nov 2020, 4:18 pm
ಮೈಸೂರು: ರೋಹಿಣಿ ಸಿಂಧೂರಿ ಐಎಎಸ್ ಪಾಸ್‌ ಮಾಡಿದ್ದಾರಾ? ಇಲ್ಲವಾ? ಎಂಬುದೇ ಅನುಮಾನ. ಅವರು ನಿಜವಾಗಿಯೂ ಸ್ವಂತ ಪರಿಶ್ರಮದಿಂದ ಪಾಸ್ ಆಗಿದ್ದಾರಾ? ಅಥವಾ ಪ್ರಭಾವ ಬಳಸಿ ಪಾಸ್ ಆಗಿದ್ದಾರಾ? ಎಂಬುದು ಖಚಿತವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ.
Vijaya Karnataka Web rohini sindhuri
ರೋಹಿಣಿ ಸಿಂಧೂರಿ


ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾಂಗ್ರೆಸ್ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಶುಕ್ರವಾರ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲಾಧಿಕಾರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ರೋಹಿಣಿ ಸಿಂಧೂರಿ ಪ್ರಭಾವ ಬಳಸಿ ಪಾಸ್ ಆಗಿದ್ದಾರಾ? ಎಂಬ ಅನುಮಾನವಿದೆ. ಅವರು ಸರ್ವಾಧಿಕಾರಿಯಂತೆ ನಡೆದುಕೊಳ್ಳುವುದು ಬಿಟ್ಟು ಜಿಲ್ಲಾಧಿಕಾರಿಯಂತೆ ನಡೆದುಕೊಳ್ಳಲಿ ಎಂದು ಹೇಳಿದರು.

ಈ ಕುರಿತು ವಿಧಾನ ಪರಿಷತ್‌ನಲ್ಲೂ ಪ್ರಸ್ತಾಪ‌ ಮಾಡುತ್ತೇನೆ. ಇದನ್ನು ಬಿಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಶಾಸಕ ಹೆಚ್ಪಿ ಮಂಜುನಾಥ್ ಅವರ ವಿರುದ್ಧ ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವುದಕ್ಕೆ ಇನ್ನು ಎರಡು ದಿನದಲ್ಲಿ ಅವರು ಕ್ಷಮೆ ಕೇಳಬೇಕು. ಅಥವಾ ಅವರು ಶಾಸಕ ಮಂಜುನಾಥ್ ಅವರಿಗೆ ಬರೆದ ಪತ್ರ ಹೇಗೆ ಹೊರಗೆ ಬಂತು? ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ರಘು ಆಚಾರ್ ಸವಾಲು ಹಾಕಿದರು.

ಮೈಸೂರು ಡಿಸಿ ರೋಹಿಣಿ ಸಿಂಧೂರಿ ಹಿಟ್ಲರ್‌ನಂತೆ ವರ್ತಿಸುತ್ತಾರೆ: ಮತ್ತೆ ಗುಡುಗಿದ ಶಾಸಕ ಮಂಜುನಾಥ್‌

ಡಿ. 7ರಂದು ನಾನು ಹಕ್ಕು ಚ್ಯುತಿ ಮಂಡಿಸುತ್ತೇನೆ. ಅವರು ಬಂದು ಉತ್ತರ ಕೊಡಲಿ. ಸುಮ್ಮನೆ ಶೋ ಮಾಡಿಕೊಂಡು ರಥ ಎಳೆದುಕೊಂಡು ಓಡಾಡುವುದಲ್ಲ. ಕೋವಿಡ್ ಬಿಕ್ಕಟ್ಟನ್ನು ನೀವು ಒಬ್ಬರೇ ನಿರ್ವಹಣೆ ಮಾಡುತ್ತಿಲ್ಲ. ನೀವು ಅದರ ಒಂದು ಭಾಗ ಅಷ್ಟೇ. ಈ ತರದವರು ಡಿಸಿಯಾದರೆ ದೇವರೇ ಕಾಪಾಡಬೇಕು ಎಂದು ಡಿಸಿ ವಿರುದ್ದ ಪರಿಷತ್ ಸದಸ್ಯ ರಘು ಆಚಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು ಸರ್ವಾಧಿಕಾರಿಯಲ್ಲ; ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಮಂಜುನಾಥ್ ಕಿಡಿ
ರಘು ಆಚಾರ್ ಜೊತೆಗೆ ಸುದ್ದಿಗೋಷ್ಠಿ ನಡೆಸಿರುವ ಹುಣಸೂರು ಕಾಂಗ್ರೆಸ್ ಶಾಸಕ ಹೆಚ್ಪಿ ಮಂಜುನಾಥ್, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ಹಿಟ್ಲರಿಸಂ ನೀತಿಯನ್ನು ನಾವು ಖಂಡಿಸುತ್ತೇವೆ. ಡಿಸಿಯೊಬ್ಬರು ಸರ್ವಾಧಿಕಾರಿಯಂತೆ ನಡೆದುಕೊಂಡಿದ್ದಾರೆ, ಕಾನೂನು ಮೀರಿ ವರ್ತಿಸಿದ್ದಾರೆ. ಒಬ್ಬ ಅಧಿಕಾರಿಯಾಗಿ ಜನಪ್ರತಿನಿಧಿಗಳ ಜೊತೆ ಹೀಗೆ ನಡೆದುಕೊಳ್ಳುತ್ತಾರಾ? ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್, ಶಾಸಕ ಯತೀಂದ್ರ, ವಿಧಾನ ಪರಿಷತ್ ಸದಸ್ಯ ಧರ್ಮಸೇನಾ, ರಘು ಆಚಾರ್ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ