ಆ್ಯಪ್ನಗರ

ಮರು ಪರೀಕ್ಷೆ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಕಾರಣಕ್ಕೆ ಮರು ಪರೀಕ್ಷೆ ನಡೆಸಲು ನಿರ್ಧರಿಸಿರುವುದನ್ನು ವಿರೋಧಿಸಿ ನಗರದ ನಾನಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 24 Mar 2016, 4:00 am
ಮೈಸೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಕಾರಣಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಮರು ಪರೀಕ್ಷೆ ನಡೆಸಲು ನಿರ್ಧರಿಸಿರುವುದನ್ನು ವಿರೋಧಿಸಿ ನಗರದ ನಾನಾ ಕಾಲೇಜುಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web students protest against the re examination
ಮರು ಪರೀಕ್ಷೆ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ


‘‘ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಸರಕಾರ ತನಿಖೆಗೆ ವಹಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮಾ.29ರಂದು ಮರು ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ರಾಜ್ಯದ ಯಾವುದೋ ಮೂಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಕಾರಣಕ್ಕೆ ರಾಜ್ಯಾದ್ಯಂತ ಮರು ಪರೀಕ್ಷೆ ನಡೆಸುವುದು ಸರಿಯಲ್ಲ’’ ಎಂದು ಆರೋಪಿಸಿ ಘೋಷಣೆ ಕೂಗಿದರು.

‘‘ನಾವು ಕಷ್ಟಪಟ್ಟು ಓದಿ ಪರೀಕ್ಷೆ ಬರೆದಿದ್ದೇವೆ. ಈಗ ಮತ್ತೆ ಅದೇ ಒತ್ತಡವನ್ನು ಎದುರಿಸಲು ನಾವು ಸಿದ್ಧರಿಲ್ಲ. ಯಾರು ತಪ್ಪು ಮಾಡಿದ್ದಾರೆ ಅವರನ್ನು ಶಿಕ್ಷಿಸಲಿ. ಆದರೆ ಒಬ್ಬರು ಮಾಡಿದ ತಪ್ಪಿಗೆ ಎಲ್ಲರನ್ನೂ ಶಿಕ್ಷೆಗೆ ಗುರಿಪಡಿಸುವುದು ಯಾವ ನ್ಯಾಯ. ಕೂಡಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮರು ಪರೀಕ್ಷೆ ನಿರ್ಧಾರವನ್ನು ಕೈಬಿಡಬೇಕು’’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಗರದ ನಾನಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ