ಆ್ಯಪ್ನಗರ

ಹಾಸ್ಟೆಲ್‌ಗೆ ನುಗ್ಗಿದ್ದ ವಿಕೃತ ಕಾಮಿ ಬಂಧನ

ನಗರದ ಕೆ.ಆರ್‌.ಆಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್‌ ಹಾಸ್ಟೆಲ್‌ಗೆ ನುಗ್ಗಿ ದಾಂಧಲೆ ಎಬ್ಬಿಸಿ, ವಿದ್ಯಾರ್ಥಿನಿಯರ ಆತಂಕಕ್ಕೆ ಕಾರಣವಾಗಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

Vijaya Karnataka 12 Aug 2018, 5:00 am
ಮೈಸೂರು: ನಗರದ ಕೆ.ಆರ್‌.ಆಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್‌ ಹಾಸ್ಟೆಲ್‌ಗೆ ನುಗ್ಗಿ ದಾಂಧಲೆ ಎಬ್ಬಿಸಿ, ವಿದ್ಯಾರ್ಥಿನಿಯರ ಆತಂಕಕ್ಕೆ ಕಾರಣವಾಗಿದ್ದ ವಿಕೃತ ಕಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web the distorted kami arrested who rush the hostel
ಹಾಸ್ಟೆಲ್‌ಗೆ ನುಗ್ಗಿದ್ದ ವಿಕೃತ ಕಾಮಿ ಬಂಧನ


ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಗ್ರಾಮವೊಂದರ ನಿವಾಸಿ ಮೊಹಮ್ಮದ್‌ ಅಲ್ತಾಫ್‌(23) ಬಂಧಿತ ಆರೋಪಿ.

ಜು.20ರಂದು ತಡರಾತ್ರಿ ಕೆ.ಆರ್‌.ಆಸ್ಪತ್ರೆ ಆವರಣದಲ್ಲಿರುವ ನರ್ಸಿಂಗ್‌ ಹಾಸ್ಟೆಲ್‌ಗೆ ನುಗ್ಗಿದ್ದ ಆರೋಪಿ, ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಕೆಲವರ ಮೇಲೆ ಹಲ್ಲೆ ನಡೆಸಿದ್ದ. ಅಲ್ಲದೆ ವಿದ್ಯಾರ್ಥಿನಿಯರ ಮೊಬೈಲ್‌ ಹಾಗೂ ಬಟ್ಟೆಗಳನ್ನು ಕಸಿದು ಪರಾರಿಯಾಗಿದ್ದ. ಈ ಬಗ್ಗೆ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಹಾಸ್ಟೆಲ್‌ಗೆ ನುಗ್ಗಿದ್ದ ಕಿಡಿಗೇಡಿಯ ಚಹರೆ ಹಾಸ್ಟೆಲ್‌ನ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಹೀಗಾಗಿ ಈತನನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ ಪೊಲೀಸರು ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳಿಗೂ ಮಾಹಿತಿ ರವಾನಿಸಿದ್ದರು. ಈ ನಡುವೆ ಆರೋಪಿ ಮೊಹಮ್ಮದ್‌ ಅಲ್ತಾಫ್‌ ಕೇರಳ ರಾಜ್ಯದ ಪಡುಪಳ್ಳಿಯಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು, ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮೈಸೂರಿನ ದೇವರಾಜ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ