ಆ್ಯಪ್ನಗರ

ಯೋಗೇಶ್ವರ್‌ ಸ್ಪರ್ಧೆ ಬಿಜೆಪಿ ಹೈಕಮಾಂಡ್‌ಗೆ ಬಿಟ್ಟಿದ್ದು

ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ ಯಿಂದ ಸ್ಪರ್ಧಿಸುವ ವಿಚಾರ ಬಿಜೆಪಿಯ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದರು.

Vijaya Karnataka 12 Nov 2019, 5:00 am
ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿಯಿಂದ ಸ್ಪರ್ಧಿಸುವ ವಿಚಾರ ಬಿಜೆಪಿಯ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದರು.
Vijaya Karnataka Web VISHWANATH C


‘‘ಯೋಗೇಶ್ವರ್ ನಮ್ಮ ಸ್ನೇಹಿತರು. ಅವರು ಯಾವತ್ತೂ ಹುಣಸೂರಿನಿಂದ ತಾವೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿಲ್ಲಘಿ. ಇದು ಬಿಜೆಪಿಯ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಬಿಜೆಪಿಗೆ ಸೇರ್ಪಡೆಯಾಗಿರುವುದು ಹುಣಸೂರು ಉಪ ಚುನಾವಣೆಯಲ್ಲಿ ಲಾಭವಾಗಲಿದೆ,’’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ಹೇಳಿದರು.

‘‘ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರದಲ್ಲಿ ಬುಧವಾರ ಸುಪ್ರೀಂಕೋರ್ಟ್ ತೀರ್ಪು ಬರಲಿದೆ. ಈ ತೀರ್ಪು ಐತಿಹಾಸಿಕವಾಗಲಿದೆ. ತೀರ್ಪು ನಮ್ಮ ಪರ ಬರುವ ವಿಶ್ವಾಸವಿದೆ,’’ ಎಂದರು.

‘‘ಸಿಎಂ ಯಡಿಯೂರಪ್ಪ ಅವರ ಆಡಿಯೋ ಬಹಿರಂಗವಾಗಿರುವ ಕುರಿತು ಕಾಂಗ್ರೆಸ್‌ನವರು ರಾಷ್ಟ್ರಪತಿಯವರಿಗೆ ದೂರು ನೀಡಲಿ. ಯಡಿಯೂರಪ್ಪ, ಕುಮಾರಸ್ವಾಮಿ ವಕೀಲರಲ್ಲ. ಸಿದ್ದರಾಮಯ್ಯ ಒಬ್ಬ ವಕೀಲರು. ಅವರಿಗೆ ಸಿ.ಡಿ ಎಷ್ಟರಮಟ್ಟಿಗೆ ಸಾಕ್ಷಿ ಆಗುತ್ತದೆ ಎಂಬುದು ಗೊತ್ತಿರಬೇಕು,’’ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ