ಆ್ಯಪ್ನಗರ

ಸಿಎಂ ಸ್ಥಾನ ಖಾಲಿ ಇಲ್ಲ : ಸಾ.ರಾ. ಮಹೇಶ್‌ ಟಾಂಗ್‌

ಮುಖ್ಯಮಂತ್ರಿ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ತಿಳಿಸಿದ್ದಾರೆ.

Vijaya Karnataka 23 Feb 2019, 5:00 am
ಮೈಸೂರು: ಮುಖ್ಯಮಂತ್ರಿ ಸ್ಥಾನ ಸದ್ಯಕ್ಕೆ ಖಾಲಿ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ತಿಳಿಸಿದ್ದಾರೆ.
Vijaya Karnataka Web there is no vacancy in cm sr mahesh tong
ಸಿಎಂ ಸ್ಥಾನ ಖಾಲಿ ಇಲ್ಲ : ಸಾ.ರಾ. ಮಹೇಶ್‌ ಟಾಂಗ್‌


ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ''ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೆಲ ಕಾಂಗ್ರೆಸ್‌ ಶಾಸಕರು ಹೇಳಿಕೆ ನೀಡುತ್ತಿದ್ದಾರೆ. ಆದರೆ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ,''ಎಂದು ಟಾಂಗ್‌ ನೀಡಿದರು.

''ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಪಡೆಯಲು ಸಿದ್ದರಾಮಯ್ಯ ಅವರ ಗಮನ ಸೆಳೆಯಲು ಕೆಲ ಕಾಂಗ್ರೆಸ್‌ ಶಾಸಕರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಿಲ್ಲ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಸೇರಿದಂತೆ ಎಲ್ಲರಿಗೂ ಮುಖ್ಯಮಂತ್ರಿಯಾಗಿದ್ದಾರೆ. ಹಾಗಾಗಿ ಈ ಬಗ್ಗೆ ಜನರಲ್ಲಿ ಗೊಂದಲ ಮೂಡಿಸುವ ಹೇಳಿಕೆ ನೀಡುವುದು ಸರಿಯಲ್ಲ. ಒಂದು ವೇಳೆ ಇದೇ ರೀತಿ ಹೇಳಿಕೆ ನೀಡುವುದು ಮುಂದುವರಿದರೆ ಜೆಡಿಎಸ್‌ ಶಾಸಕರೂ ಹೇಳಿಕೆ ನೀಡಲು ಆರಂಭಿಸಬೇಕಾಗುತ್ತದೆ,''ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ