ಆ್ಯಪ್ನಗರ

ಟಿಪ್ಪು ಯಾವ ಹುಲಿ, ರಣರಂಗದಲ್ಲಿ ಆತ ಹೋರಾಡಿಯೇ ಇಲ್ಲ : 'ಸಿಂಹ' ಘರ್ಜನೆ

ಟಿಪ್ಪು ಸುಲ್ತಾನ್ ಮೈಸೂರು ಹುಲಿ ಯಾವಾಗ ಆಗಿದ್ದಾ? ಟಿಪ್ಪು ಯಾವ ಹುಲಿಯನ್ನ ಕೊಂದಿತ್ನಂತೆ. ಪೋಸ್ಟರ್ ಗಳಲ್ಲಿ ಹುಲಿ ಚಿತ್ರಗಳನ್ನ ಹಾಕಿಬಿಟ್ರೆ ಮೈಸೂರು ಹುಲಿ ಆಗಬಿಡ್ತಾನಾ.? ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.

Edited byಬಾನುಪ್ರಸಾದ ಕೆ.ಎನ್\u200c. | Lipi 19 May 2022, 10:29 pm
ಮೈಸೂರು: ಟಿಪ್ಪು ಸುಲ್ತಾನ್ ಮೈಸೂರು ಹುಲಿ ಯಾವಾಗ ಆಗಿದ್ದಾ? ಟಿಪ್ಪು ಯಾವ ಹುಲಿಯನ್ನ ಕೊಂದಿತ್ನಂತೆ. ಪೋಸ್ಟರ್ ಗಳಲ್ಲಿ ಹುಲಿ ಚಿತ್ರಗಳನ್ನ ಹಾಕಿಬಿಟ್ರೆ ಮೈಸೂರು ಹುಲಿ ಆಗಬಿಡ್ತಾನಾ.? ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
Vijaya Karnataka Web prathap simha


ಮೈಸೂರಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, 3 ಮತ್ತು 4ನೇ ಆಂಗ್ಲೋ ಮೈಸೂರು ಯುದ್ದದಲ್ಲಿ ಟಿಪ್ಪು ಸುಲ್ತಾನ್ ಯಾವ ರಣರಂಗದಲ್ಲಿ ಹೋರಾಟ ಮಾಡ್ದಾ? ಟಿಪ್ಪು ಸುಲ್ತಾನ್ ಕೋಟೆಯೊಳಗೆ ಸತ್ತಿದ್ದು, ಹುಲಿ ಎಂದಿಗೂ ಬೋನ್ ನಲ್ಲಿ ಸಾಯೋಲ್ಲ. ಟಿಪ್ಪು ಸುಲ್ತಾನ್ ಯುದ್ಧ ಮಾಡದೆ ಸಂಧಾನಕ್ಕೆ ಕಳುಹಿಸಿದ್ದ. ನಾಲ್ಕನೇ ಆಗ್ಲೋ ಮೈಸೂರು ಯುದ್ಧದಲ್ಲಿ ಹುಲಿ ಎಲ್ಲಿತ್ತು. ಕೋಟೆಯೊಳಗೆ ಸತ್ತು ಬಿದ್ದಿತ್ತು ಎಂದು ಲೇವಡಿ ಮಾಡಿದ್ದಾರೆ. ಯಾರೋ ನಾಲ್ಕು ಜನ ಟಿಪ್ಪು ಸುಲ್ತಾನ್ ಹುಲಿ ಅಂದ್ರು. ಟಿಪ್ಪು ಸುಲ್ತಾನ್ ಮೈಸೂರು ಹುಲಿ ಅಲ್ಲ. ಎಂದಿಗೂ ಮೈಸೂರು ಹುಲಿ ನಾಲ್ವಡಿ ಕೃಷ್ಣ ರಾಜ್ ಒಡೆಯರ್ ಅವರೇ. ನಮ್ಮ ಹುಲಿ ಕೆ.ಆರ್.ಎಸ್. ಕಟ್ಟಿದೆ. ಬೆಂಗಳೂರಿಗೆ ಕರೆಂಟ್ ಕೊಟ್ರು ಅವರೇ ಎಂದಿಗೂ ನಮ್ಮ ಹುಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಅಶ್ವತ್ಥ್ ನಾರಾಯಣರನ್ನ ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗ್ತಿದೆ: ಪ್ರತಾಪ್ ಸಿಂಹ ಕಿಡಿ

ಯುದ್ಧವನ್ನೇ ಮಾಡಿಲ್ಲ!
ಟಿಪ್ಪು ಸುಲ್ತಾನ್ ಒಬ್ಬ ಹೇಡಿ. ಆತ ರಣಾಂಗಣದಲ್ಲಿ ಯುದ್ಧವನ್ನೇ ಮಾಡಿಲ್ಲ. ನೇರವಾಗಿ ವೈರಿಗಳನ್ನು ಸದೆಬಡಿಯೋ ಧೈರ್ಯ ಅವನಿಗಿರಲಿಲ್ಲ. ಇತಿಹಾಸದಲ್ಲಿ ಅವನನ್ನ ಅತಿಯಾಗಿ ಬಿಂಬಿಸಲಾಗಿದೆ ಟಿಪ್ಪು ಅಸಲಿಗೆ ವೀರ ಅಲ್ಲವೇ ಅಲ್ಲ ಅಂತ ಟಾಂಗ್ ಕೊಟ್ರು.

ಸಿದ್ದರಾಮಯ್ಯ ಯಾವ ರಾಜ್ಯದಲ್ಲಿ ಸಿಎಂ ಆಗ್ತಾರೆ?
ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆದ್ರೆ ದಲಿತರ ಸಾಲ ಮನ್ನಾ ಮಾಡುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಯಾವ ರಾಜ್ಯದಲ್ಲಿ ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂಬುದು ನನಗ ಗೊತ್ತಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಿದ್ರು. ಡಾ.ಜಿ. ಪರಮೇಶ್ವರ್ ಸಿಎಂ ಆಗುವುದನ್ನ ತಪ್ಪಿಸಿದ್ದೇ ಸಿದ್ದರಾಮಯ್ಯ. ಜಿ. ಪರಮೇಶ್ವರ್ ಅಂಗಾಲಾಚಿದರು ಮಂತ್ರಿ ಸ್ಥಾನವನ್ನು ಕೊಡಲಿಲ್ಲ. ಕೋಲಾರದಲ್ಲಿ ಮುನಿಯಪ್ಪ ಹಾಗೂ ಕಲ್ಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆಯರನ್ನ ಸೋಲಿಸಿದ್ದೇ ಸಿದ್ದರಾಮಯ್ಯ ದಲಿತರಿಗೆ ಕೊಟ್ಟ ಕೊಡುಗೆ. ದಲಿತ ಸಮಾಜ ಪ್ರಜ್ಞಾವಂತ ಸಮಾಜ. ಸಿದ್ದರಾಮಯ್ಯನವರಿಗೆ ಮುಸ್ಲಿಂರಿಗೆ ಬಗ್ಗೆ ಮಾತ್ರ ವಿಶೇಷ ಕಾಳಜಿ ಇದೆ ಹೊರತು ದಲಿತ ಸಮಾಜದ ಮೇಲಲ್ಲ ಎಂದು ಟೀಕಿಸಿದರು.

ಆರೋಪಿಗಳ ಬೆಂಬಲಿಸುವ ಜಮೀರ್‌ಗೆ ಸಿದ್ದರಾಮಯ್ಯ ಕೃಪಾಕಟಾಕ್ಷ: ಪ್ರತಾಪ್ ಸಿಂಹ ಲೇವಡಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ಹುಲಿ..!
ಎಂದಿಗೂ ಮೈಸೂರು ಹುಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೇ. ನಮ್ಮ ಹುಲಿ ಕೆ.ಆರ್.ಎಸ್. ಕಟ್ಟಿದ್ದಾರೆ. ಬೆಂಗಳೂರಿಗೆ ಕರೆಂಟ್ ಕೊಟ್ಟರು. ಅವರೇ ಎಂದಿಂಗೂ ನಮ್ಮ ಹುಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.ಟಿಪ್ಪು ಸುಲ್ತಾನ್ ಯುದ್ಧ ಮಾಡದೆ ಸಂಧಾನಕ್ಕೆ ಕಳುಹಿಸಿದ್ದ. ನಾಲ್ಕನೇ ಆಗ್ಲೋ ಮೈಸೂರು ಯುದ್ಧದಲ್ಲಿ ಹುಲಿ ಎಲ್ಲಿತ್ತು. ಕೋಟೆಯೊಳಗೆ ಸತ್ತು ಬಿದ್ದಿತ್ತು. ಯಾರೋ ನಾಲ್ಕು ಜನ ಟಿಪ್ಪು ಸುಲ್ತಾನ್ ನನ್ನು ಹುಲಿ ಅಂದಕಾರಣಕ್ಕೆ ಅವನು ಮೈಸೂರು ಹುಲಿ ಆಗಲ್ಲ ಎಂದರು.
ಲೇಖಕರ ಬಗ್ಗೆ
ಬಾನುಪ್ರಸಾದ ಕೆ.ಎನ್\u200c.
ವಿಜಯ ಕರ್ನಾಟಕ ಡಿಜಿಟಲ್\u200c ಪತ್ರಕರ್ತ. ವಿಜ್ಞಾನ ತಂತ್ರಜ್ಞಾನ, ರಾಷ್ಟ್ರೀಯ- ಅಂತಾರಾಷ್ಟ್ರೀಯ, ಸಾಹಿತ್ಯ-ಕಲೆ, ಶಿಕ್ಷಣ, ಆಸಕ್ತಿಯ ವಿಷಯಗಳು... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ