ಆ್ಯಪ್ನಗರ

ಭರದಿಂದ ಸಾಗಿದ ದಸರಾ ಸಿದ್ಧತೆ - ಜಂಬೂ ಸವಾರಿ ಆನೆ, ಕುದುರೆಗಳಿಗೆ ಕುಶಾಲತೋಪು ತಾಲೀಮು

ಮೀಸಲು ಪೊಲೀಸ್ ಪಡೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಿಕೊಟ್ಟಿತು. ಜಂಬೂ ಸವಾರಿ ಹೊರಡುವ ಮುನ್ನ 21 ಸುತ್ತು ಕುಶಾಲತೋಪು ಸಿಡಿಸಲಾಗುತ್ತದೆ. ಈ ವೇಳೆ ವೇಳೆ ಆನೆಗಳು, ಕುದುರೆಗಳು ಹೆದರಿಕೊಳ್ಳದ ಹಾಗೆ ನೋಡಿಕೊಳ್ಳುವುದು ಇದರ ಉದ್ದೇಶ.

Vijaya Karnataka Web 16 Oct 2020, 2:33 pm
ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಜಂಬೂ ಸವಾರಿಯ ವೇಳೆ ಕುಶಾಲತೋಪು ಸಿಡಿಸುವ ಕಾರ್ಯಕ್ರಮಕ್ಕೆ ವಿಶೇಷವಾದ ತಾಲೀಮು ನಡೆಯಿತು.
Vijaya Karnataka Web Mysuru Dasara Preparation


ಅರಮನೆಯ ಕೋಟೆ ಮಾರಮ್ಮ ದೇವಸ್ಥಾನದ ಬಳಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯಿಂದ ಕುಶಾಲತೋಪು ಸಿಡಿಸುವ ತಾಲೀಮು ನಡೆಯಿತು. ಜಂಬೂ ಸವಾರಿ ಹೊರಡುವ ಮುನ್ನ 21 ಸುತ್ತು ಕುಶಾಲತೋಪು ಸಿಡಿಸಲಾಗುತ್ತದೆ. ಕುಶಾಲತೋಪು ಸಿಡಿಸುವ ವೇಳೆ ಆನೆಗಳು, ಕುದುರೆಗಳು ಹೆದರಿಕೊಳ್ಳದ ಹಾಗೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ. ಕುಶಾಲತೋಪು ಸಿಡಿಸಲು 7 ಫಿರಂಗಿ ಗಾಡಿಗಳ ಬಳಕೆ ಮಾಡಲಾಯಿತು. ಈ ವೇಳೆ ಸಿಎಆರ್‌ನ 30 ಸಿಬ್ಬಂದಿ ತಾಲೀಮಿನಲ್ಲಿ ಭಾಗವಹಿಸಿದ್ದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, "ಕೊರೊನಾ ಸೋಂಕು ಎಲ್ಲೆಡೆ ಹೆಚ್ಚಾಗುತ್ತಿದೆ. ಕೊರೊನಾ ಇದೆ ಎಂದು ಹಬ್ಬಗಳು ಬರದೆ ಇರುವುದಿಲ್ಲ. ಆದರೆ ಹಬ್ಬ ಆಚರಣೆ ಮಾಡುವ ರೀತಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡು ಹಬ್ಬವನ್ನು ಆಚರಿಸಬೇಕಾದ ಅನಿವಾರ್ಯತೆಯಿದೆ," ಎಂದರು.

ವೈರುಧ್ಯ ದಸರೆ: ಉತ್ಸವವಿದೆ-ಜನರ‍್ಯಾರು ವೀಕ್ಷಿಸುವಂತಿಲ್ಲ, ದೀಪಾಲಂಕಾರವಿದೆ-ಪ್ರವಾಸಿಗರು ಬರುವಂತಿಲ್ಲ!
ಈ ಬಾರಿ ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಸರಳವಾಗಿ ಸಾಂಕೇತಿಕ ನಾಡಹಬ್ಬವನ್ನು ಆಚರಿಸಬೇಕು. ಹೀಗಾದಾಗ ಮಾತ್ರವೇ ಕೊರೊನಾ ಹೆಚ್ಚಾಗುವುದನ್ನು ತಡೆಗಟ್ಟಬಹುದು. ಮುಂದಿನ ವರ್ಷ ಎಲ್ಲವೂ ಸರಿಯಾದರೆ ಹಬ್ಬವನ್ನು ಆಚರಿಸಬಹುದು. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರೂ ಆರೋಗ್ಯದ ಕಡೆಗೆ ಗಮನ ಕೊಡುವುದು ಮುಖ್ಯ. ಇನ್ನು ಹಬ್ಬದ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆಯಲ್ಲಿ ಜನಸಂದಣಿ ಹೆಚ್ಚಾಗುವುದರಿಂದ ಬಂದ್‌ ಮಾಡುವ ಬಗ್ಗೆ ನಗರಪಾಲಿಕೆ ಆಯುಕ್ತರೊಂದಿಗೆ ಮಾತುಕತೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ