ಆ್ಯಪ್ನಗರ

ಮೈಸೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕ ಅಮರ್ ದಾಸ್ ಇನ್ನಿಲ್ಲ

ಹಿರಿಯ ಪತ್ರಿಕಾ ಛಾಯಾಗ್ರಾಹಕ ಅಮರ್ ದಾಸ್ (83) ಭಾನುವಾರ ನಗರದ ತಮ್ಮ ನಿವಾಸದಲ್ಲಿ ನಿಧನರಾದರು. ಸುಧರ್ಮ, ಡೆಕ್ಕನ್ ಹೆರಾಲ್ಡ್ ಮುಂತಾದ ಪತ್ರಿಕೆಗಳಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ.

Vijaya Karnataka Web 20 Sep 2020, 2:33 pm
ಮೈಸೂರು: ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ಅಮರ್ ದಾಸ್ ಡಿ ಹೆಚ್. (83) ಅವರು ಭಾನುವಾರ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಮೈಸೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
Vijaya Karnataka Web ಅಮರ್ ದಾಸ್


ಅವರು ಬಾಂಬೆಯ ಸೆಂಟ್ ಕ್ಷೇವಿಯರ್ ಕಾಲೇಜಿನಲ್ಲಿ ಫೋಟೋಗ್ರಫಿ ಡಿಪ್ಲೊಮಾ ಮಾಡಿ 1956ರಲ್ಲಿ ಮೈಸೂರಿಗೆ ಹಿಂದಿರುಗಿದರು. ಹವ್ಯಾಸಿ ಛಾಯಾಗ್ರಾಹಕರಾಗಿ ಮೈಸೂರಿನ ಹಲವಾರು ಘಟನಾವಳಿಗಳ ಅಪರೂಪದ ಛಾಯಾಚಿತ್ರಗಳನ್ನು ಸಂಗ್ರಹಿಸಿದ್ದರು. ಸುಧರ್ಮ, ಡೆಕ್ಕನ್ ಹೆರಾಲ್ಡ್ ಮುಂತಾದ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಆಶಾ ದಾಸ್, ಮಕ್ಕಳಾದ ಪ್ರೀತಿ, ಜ್ಯೋತಿ, ನಿತಿನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿನ ವಿಜಯನಗರದಲ್ಲಿರುವ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ