Please enable javascript.Siddaramaiah,ನಾನು, ಡಿಕೆಶಿ ಒಟ್ಟಿಗಿದ್ದೇವೆ, ಸರಕಾರ ಬಿದ್ರೆ ಎಲೆಕ್ಷನ್‌ಗೆ ನಾವ್ ರೆಡಿ: ಸಿದ್ದರಾಮಯ್ಯ - we are ready for elections says siddaramaiah in mysore - Vijay Karnataka

ನಾನು, ಡಿಕೆಶಿ ಒಟ್ಟಿಗಿದ್ದೇವೆ, ಸರಕಾರ ಬಿದ್ರೆ ಎಲೆಕ್ಷನ್‌ಗೆ ನಾವ್ ರೆಡಿ: ಸಿದ್ದರಾಮಯ್ಯ

Lipi 3 Jan 2022, 5:06 pm
Subscribe

​​ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹತಾಶರಾಗಿ ಟೀಕಿಸುತ್ತಿದ್ದಾರೆ. ಯೋಜನೆ ಬಗ್ಗೆ ಅವರ ಪಕ್ಷದ ಕೊಡುಗೆ ಏನು ಎಂದು ಪ್ರಶ್ನಿಸಿದರು.

we are ready for elections says siddaramaiah in mysore
ನಾನು, ಡಿಕೆಶಿ ಒಟ್ಟಿಗಿದ್ದೇವೆ, ಸರಕಾರ ಬಿದ್ರೆ ಎಲೆಕ್ಷನ್‌ಗೆ ನಾವ್ ರೆಡಿ: ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿರೋ ಬಿಜೆಪಿ ಸರಕಾರವನ್ನು ಅಸ್ಥಿರಗೊಳಿಸಲ್ಲ, ಬಿಜೆಪಿಯಲ್ಲೇ ಒಳಜಗಳ ಇದೆ. ಅವ್ರ ಕಚ್ಚಾಟದಿಂದ ಸರಕಾರ ಬಿದ್ದುಹೋದ್ರೆ ನಾವ್ ಎಲೆಕ್ಷನ್ ಗೆ ರೆಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಲ್ಲಿ ಮಾತಾಡಿದ ಅವರು, ನಾವು 2023ರ ಏಪ್ರಿಲ್‌ ನಲ್ಲಿ ವಿಧಾನ ಸಭೆಗೆ ಚುನಾವಣೆ ನಡೆಯಬೇಕು ಎಂದು ಬಯಸುತ್ತೇವೆ. ಆದರೆ ಬಿಜೆಪಿಯಲ್ಲಿ ಈಗ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ. ಅವರು ಕಚ್ಚಾಡಿಕೊಂಡು, ಅವಧಿಗೂ ಮುನ್ನವೇ ಚುನಾವಣೆಗೆ ಬಂದರೆ ಅದನ್ನು ಎದುರಿಸಲು ನಾವು ಸಿದ್ದರಿದ್ದೇವೆ ಎಂದು ಹೇಳಿದರು.

ಮೇಕೆದಾಟು ಹೋರಾಟದಲ್ಲಿ ರಾಜಕೀಯ ಇಲ್ಲ, ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಡಿ. ಕೆ. ಶಿವಕುಮಾರ್

ಡಿ.ಕೆ.ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ನಾವಿಬ್ಬರೂ ಚೆನ್ನಾಗಿದ್ದೇವೆ. ಆದರೆ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯಗಳು ಇವೆ ಎಂದು ವಿಪಕ್ಷಗಳು ಹೇಳಿ ಒಡಕು ಮೂಡಿಸಲು ಯತ್ನಿಸುತ್ತಿವೆ ಎಂದು ಕಿಡಿಕಾರಿದರು.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹತಾಶರಾಗಿ ಟೀಕಿಸುತ್ತಿದ್ದಾರೆ. ಯೋಜನೆ ಬಗ್ಗೆ ಅವರ ಪಕ್ಷದ ಕೊಡುಗೆ ಏನು ಎಂದು ಪ್ರಶ್ನಿಸಿದರು.

ಮೇಕೆದಾಟು ಯೋಜನೆ ಸಂಬಂಧ ಬಿಜೆಪಿ ತಮಿಳುನಾಡಿಗೆ ಸಪೋರ್ಟ್ ಮಾಡ್ತಿದೆ.ಮೇಕೆದಾಟು ಯೋಜನೆ ಹೊಸ ಯೋಜನೆಯೇನಲ್ಲ. ಅದು ಬಹಳ ಹಳೆಯದಾದ ಯೋಜನೆ‌ಯಾಗಿದೆ. 1968 ರಲ್ಲಿ ನಿಜಲಿಂಗಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ಕಾಂಗ್ರೆಸ್ ಈ ಯೋಜನೆಯ ಬಗ್ಗೆ ಪ್ರಸ್ತಾಪಿಸಿತ್ತು. ಆದರೆ ಹಲವಾರು ಕಾರಣಗಳಿಂದ ಯೋಜನೆ ಅನುಷ್ಠಾನಕ್ಕೆ ಬಂದಿರಲಿಲ್ಲ. ಈಗ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಜನವರಿ 9 ರಿಂದ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಆದರೆ ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡ್ತಿದೆ ಅಂತ ಬಿಂಬಿಸಲಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ರಾಜ್ಯದ ಹಿತ, ರೈತರಿಗಾಗಿ ಮೇಕೆದಾಟು ಹೋರಾಟ; ಡಿ.ಕೆ ಶಿವಕುಮಾರ್‌

ನಮ್ಮ ಪಕ್ಷದ ಸರಕಾರದ ಅಧಿಕಾರವಧಿಯಲ್ಲಿ ಅನಗತ್ಯವಾಗಿ ಕಾಲಹರಣ ಮಾಡಿದ್ದೇವೆ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದುದು. ತಮಿಳುನಾಡಿನವರು ರಾಜಕೀಯ ಕಾರಣಕ್ಕಾಗಿ ಖ್ಯಾತೆ ತೆಗೆಯುತ್ತಿದ್ದಾರೆ. ಈಗಿನ ಪರಿಸ್ಥಿಯಲ್ಲಿ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ತಡೆಯಲು ತಮಿಳುನಾಡಿನವರಿಗೆ ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ