ಆ್ಯಪ್ನಗರ

ಸಂಸದ ಪ್ರತಾಪ್‌ ಸಿಂಹ ಪಂಥಾಹ್ವಾನ ಸ್ವೀಕಾರ, ಜೂ.29ರಂದು ಚರ್ಚೆಗೆ ಸಿದ್ಧ ಎಂದ ಲಕ್ಷ್ಮಣ್‌

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಎಸ್ ಟಿ ಸೋಮಶೇಖರ್ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿ.

Lipi 25 Jun 2022, 6:34 pm
ಮೈಸೂರು: ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಕೈ ವಕ್ತಾರ ಲಕ್ಷ್ಮಣ್ ನಡುವಿನ ವಾಕ್ಸಮರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಮೈಸೂರು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆಗೆ ಸಂಸದ ಪ್ರತಾಪ್ ಸಿಂಹ ನೀಡಿದ್ಧ ಪಂಥಾಹ್ವಾನಕ್ಕೆ ಸಿದ್ದರಾಮಯ್ಯ ಸೂಚನೆ ಮೇರೆಗೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಡೇಟ್ ಫಿಕ್ಸ್ ಮಾಡಿದ್ದಾರೆ.
Vijaya Karnataka Web will debate with mysuru mp pratap simha says congress spokes person lakshman
ಸಂಸದ ಪ್ರತಾಪ್‌ ಸಿಂಹ ಪಂಥಾಹ್ವಾನ ಸ್ವೀಕಾರ, ಜೂ.29ರಂದು ಚರ್ಚೆಗೆ ಸಿದ್ಧ ಎಂದ ಲಕ್ಷ್ಮಣ್‌


ಜೂನ್ 29ರ ಮಧ್ಯಾಹ್ನ 12 ಗಂಟೆಗೆ ಮೈಸೂರು ಸಂಸದರ ಕಚೇರಿಯಲ್ಲಿ ಚರ್ಚೆಗೆ ಸಿದ್ದ. ಸಂಸದರ ಜಲದರ್ಶಿನಿಯ ಕಚೇರಿ ಬಳಿ ದಾಖಲೆ ಸಮೇತ ಹಾಜರಾಗುವೆ. ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾಗಿ ಪ್ರತಾಪ್ ಸಿಂಹ ಎದುರು ಚರ್ಚೆಗೆ ಬರುತ್ತಿದ್ದೇನೆ. ಎರಡನೇ ಬಾರಿಗೆ ಆಹ್ವಾನ ನೀಡುತ್ತಿದ್ದೂ ಈ ಬಾರಿ ಪಲಾಯನ ಮಾಡಬೇಡಿ. ಜನರಿಗೆ ಸತ್ಯ ಹೇಳಲು ಯಾರಾದರೇನು.? ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಮಣ್ ಸವಾಲು ಹಾಕಿದರು.

ಮಾತಿಗೆ ಬದ್ಧ, ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ದಸರಾ ವೇಳೆ ಲೋಕಾರ್ಪಣೆ ಖಚಿತ: ಪ್ರತಾಪ್ ಸಿಂಹ

ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂ. ಲಕ್ಷ್ಮಣ್, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಎಸ್ ಟಿ ಸೋಮಶೇಖರ್ ಅವರೇ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿ. ಎಸ್. ಟಿ ಸೋಮಶೇಖರ್ ಮೈಸೂರಿಗೆ ಬರುತ್ತಿರುವುದು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸಲುವಾಗಿ. ಬಿಜೆಪಿ ಸ್ಥಳೀಯ ಮುಖಂಡರ ಜೊತೆ ಸೇರಿಕೊಂಡು ಎಸ್. ಟಿ ಸೋಮಶೇಖರ್ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿ ಸೋಲು ಕಂಡಿದೆ. ಹಾಗಾಗಿ ಅವರನ್ನೇ ಮುಂದುವರಿಸಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಿದರು.

ಪ್ರಧಾನಿ ಮೋದಿ ಪಿಕ್ನಿಕ್..!

ಪ್ರಧಾನಿ ಮೋದಿ ಅವರ ರಾಜ್ಯ ಪ್ರವಾಸದ ಬಗ್ಗೆ ಟೀಕಿಸಿದ ಎಂ. ಲಕ್ಷ್ಮಣ್, ಮೈಸೂರಿನಲ್ಲಿ ಪಿಕ್ನಿಕ್ ಮುಗಿಸಿ ಹೊರಟ ಮೋದಿ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ್ದಾರೆ. ಮೈಸೂರಿನಲ್ಲಿ 19 ಕೋಟಿ, ಬೆಂಗಳೂರಿನಲ್ಲಿ 34 ಕೋಟಿ ರೂ. ಮೋದಿಗಾಗಿ ಆದ ಖರ್ಚು. ಬಂದು ಹೋದ ಮೋದಿಯಿಂದ ರಾಜ್ಯಕ್ಕೆ ಏನು ಕೊಡುಗೆ ಇಲ್ಲ. 20 ನಿಮಿಷ ಯೋಗ ಮಾಡಿ ಪ್ರಚಾರ ಮಾಡಿಕೊಂಡು ಹೋದರು. ಈ ಬಾರಿ ಮೈಸೂರಿನಲ್ಲಿ ಚುನಾವಣೆ ಇಲ್ಲದಿದ್ದರಿಂದ ಯಾವು ಅನುದಾನವನ್ನು ನೀಡಲಿಲ್ಲ.ಒಟ್ಟಾರೆ ರಾಜ್ಯದಲ್ಲಿ ಮೋದಿ ಪಿಕ್ನಿಕ್ ಮುಗಿಸಿ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.

PM Modi Mysuru Tour: ಪ್ರಧಾನಿ ಮೋದಿ ಮೈಸೂರು ಪ್ರವಾಸಕ್ಕೆ 25 ಕೋಟಿ ರೂ. ವೆಚ್ಚ..!

ನರೇಂದ್ರ ಮೋದಿ ಭೇಟಿಯಿಂದ ಮೈಸೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ವ್ಯಂಗ್ಯವಾಡಿದ ಎಂ.ಲಕ್ಷ್ಮಣ್, ಯೋಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ‌. ಅಂದಿನ ಮೈಸೂರು ಅರಸರ ಕಾಲದಿಂದಲೂ ಯೋಗ ಇದೆ. ಪ್ರವಾಸಿಗರು ಭೇಟಿ ನೀಡುವ ತಾಣಗಳ ಪೈಕಿ ಇಡೀ ಏಷ್ಯಾದಲ್ಲೇ ಮೈಸೂರು 4ನೇ ಸ್ಥಾನದಲ್ಲಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಆದರೂ ಬಿಜೆಪಿಯವರು ಮೋದಿ ಭೇಟಿಯಿಂದಲೇ ಮೈಸೂರು ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ ಎಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಮೋದಿ ಭೇಟಿಯಿಂದ ಮೈಸೂರಿಗೆ ಯಾವುದೇ ಪ್ರಯೋಜನವಾಗಿಲ್ಲ. ಮೋದಿ ಮೈಸೂರು ಭೇಟಿ ವಿಚಾರದಲ್ಲೂ ಬಿಜೆಪಿ ನಾಯಕರ ನಡುವೆ ಕ್ರೆಡಿಟ್ ವಾರ್ ನಡೆಯಿತು ಎಂದು ಲಕ್ಷ್ಮಣ್‌ ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ