ಆ್ಯಪ್ನಗರ

ರಾಜ್ಯದಲ್ಲಿ ಜಲಾನಯನ –ಸೂಕ್ಷ್ಮ ನೀರಾವರಿಗೆ ಒತ್ತು: ಕೇಂದ್ರ ಸಚಿವ ಕೈಲಾಶ್ ಚೌಧರಿ ಭೇಟಿ ಮಾಡಿದ ಬಿ.ಸಿ.ಪಾಟೀಲ್

ರಾಜ್ಯದಲ್ಲಿ ಜಲಾನಯನ ಸೂಕ್ಷ್ಮ ನೀರಾವರಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್‌ ಬುಧವಾರ ಕೇಂದ್ರ ಸಚಿವ ಕೈಲಾಶ್ ಚೌಧರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಕುರಿತಾದ ವಿವರ ಇಲ್ಲಿದೆ.

Vijaya Karnataka Web 9 Sep 2020, 2:26 pm
ಹೊಸದಿಲ್ಲಿ: ರಾಜ್ಯದಲ್ಲಿ ಜಲಾನಯನ ಹಾಗೂ ಸೂಕ್ಷ್ಮ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ಕೃಷಿ ಸಚಿವರಾದ ಬಿ.ಸಿ.ಪಾಟೀಲರಿಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಕೈಲಾಶ್ ಚೌದರಿ ಅವರನ್ನು ಭೇಟಿ ಮಾಡಿದರು.
Vijaya Karnataka Web bc patil


ದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಸಚಿವರನ್ನು ಭೇಟಿಯಾದ ಬಿ.ಸಿ.ಪಾಟೀಲರು, ರಾಜ್ಯದ ಕೃಷಿ ಅಭಿವೃದ್ಧಿಗಳ ಕುರಿತು ಚರ್ಚಿಸಿ, ರೈತ ಕಲ್ಯಾಣ ನಿಧಿಯಡಿಯಲ್ಲಿ ರಾಜ್ಯಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಿದರು.

ಉಪ ಸಭಾಪತಿ ಚುನಾವಣೆ: ಬಿಜೆಪಿಯಿಂದ ತನ್ನ ರಾಜ್ಯಸಭಾ ಸದಸ್ಯರಿಗೆ 3 ವಾಕ್ಯದ ವಿಪ್‌ ಜಾರಿ

ವೈಜ್ಞಾನಿಕ ಜಲಾನಯನ ಯೋಜನೆ ಮತ್ತು ಅನುಷ್ಠಾನದ ಮೂಲಕ ಮಣ್ಣಿನ ಮತ್ತು ಜಲ ಸಂರಕ್ಷಣಾ ಚಟುವಟಿಕೆಗಳಂತಹ ಬರ ನಿವಾರಣಾ ಚಟುವಟಿಕೆಗಳನ್ನು ಕೈಗೊಳ್ಳಲು ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ- ಡಬ್ಲ್ಯೂಡಿಸಿ ಯೋಜನೆಯಡಿ ಕರ್ನಾಟಕದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಜಲಾನಯನ ಅಭಿವೃದ್ಧಿಗೆ 53 ಲಕ್ಷ ಹೆಕ್ಟೇರ್ ಪ್ರದೇಶ ಲಭ್ಯವಿದ್ದು, ಈ ಪೈಕಿ ಪ್ರತಿ ವರ್ಷ 5 ಲಕ್ಷ ಹೆಕ್ಟೇರ್ ಪ್ರದೇಶದಂತೆ ಕೇಂದ್ರ ಸರ್ಕಾರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಕೈಲಾಶ್ ಚೌದರಿ, ಈ ಬಗ್ಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದು ತಿಳಿದುವಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ