ಆ್ಯಪ್ನಗರ

ದಿಲ್ಲಿ ಆರೋಗ್ಯ ಸಚಿವರ ಪರಿಸ್ಥಿತಿ ಗಂಭೀರ, ಖಾಸಗಿ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಚಿಕಿತ್ಸೆಗೆ ಚಿಂತನೆ

"ಅವರ ಆರೋಗ್ಯ ಸ್ಥಿತಿ ಸುಧಾರಿಸದೇ ಇದ್ದಲ್ಲಿ ದೊಡ್ಡ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ನಾವು ಚಿಂತನೆ ನಡೆಸುತ್ತಿದ್ದೇವೆ," ಎಂದು ಸತ್ಯೇಂದ್ರ ಜೈನ್‌ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ.

Agencies 19 Jun 2020, 6:01 pm

ಹೊಸದಿಲ್ಲಿ: ಕೊರೊನಾ ಸೋಂಕಿತರಾಗಿರುವ ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಆರೋಗ್ಯ ಹದಗೆಟ್ಟಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಿ ಪ್ಲಾಸ್ಲಾ ಥೆರಪಿ ನಡೆಸಲು ನಿರ್ಧರಿಸಲಾಗಿದೆ. ಜೈನ್‌ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಅವರಲ್ಲಿ ನ್ಯುಮೋನಿಯಾ ಲಕ್ಷಣವೂ ಕಾಣಿಸಿಕೊಂಡಿದೆ.
Vijaya Karnataka Web Satyendra Jain


"ಅವರ ಆರೋಗ್ಯ ಸ್ಥಿತಿ ಸುಧಾರಿಸದೇ ಇದ್ದಲ್ಲಿ ದೊಡ್ಡ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ನಾವು ಚಿಂತನೆ ನಡೆಸುತ್ತಿದ್ದೇವೆ," ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ.

ಮಂಗಳವಾರ ಸತ್ಯೇಂದ್ರ ಜೈನ್‌ರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊದಲ ದಿನದ ಕೊರೊನಾ ವೈರಸ್‌ ಪರೀಕ್ಷೆಯಲ್ಲಿ ಅವರ ವರದಿ ನೆಗೆಟಿವ್‌ ಬಂದಿತ್ತು. ಆದರೆ ಬುಧವಾರ ಅವರಿಗೆ ಕೊರೊನಾ ವೈರಸ್‌ ತಗುಲಿರುವುದು ದೃಢಪಟ್ಟಿತ್ತು. ಮೂಲಗಳ ಪ್ರಕಾರ ಅವರನ್ನು ಸಾಕೇತ್‌ನಲ್ಲಿರುವ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲಿಸಲು ಉದ್ದೇಶಿಸಲಾಗಿದೆ.
ಎಎಪಿ ಶಾಸಕಿ ಆತಿಶಿ, ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ಗೆ ಕೊರೊನಾ

"ಕೊರೊನಾ ವಿರುದ್ಧ ಹೋರಾಡುತ್ತಿರುವ ದಿಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇನೆ," ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟ್ಟೀಟ್‌ ಮಾಡಿದ್ದಾರೆ.

ಸಚಿವರ ತ್ವರಿತ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಾಲ್‌ ತಮ್ಮ ಟ್ಟಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಸತ್ಯೇಂದ್ರ ಜೂನ್‌ ರಾಜೀವ್‌ ಗಾಂಧಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರವಷ್ಟೆ ಸತ್ಯೇಂದ್ರ ಜೈನ್‌ ಅಮಿತ್‌ ಶಾ ಅಧ್ಯಕ್ಷತೆಯ ಉನ್ನತ ನಾಯಕರ ಸಭೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಲೆಫ್ಟಿನೆಂಟ್‌ ಗವರ್ನರ್‌, ಸಿಎಂ ಅರವಿಂದ ಕೇಜ್ರಿವಾಲ್‌, ಡಿಸಿಎಂ ಮನೀಶ್‌ ಸಿಸೋಡಿಯಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್‌ ಕೂಡ ಉಪಸ್ಥಿತರಿದ್ದರು. ಅಷ್ಟೆ ಅಲ್ಲದೆ ಇನ್ನೂ ಹಲವು ಸಭೆಗಳಲ್ಲಿ ಜೈನ್‌ ಅವರು ಭಾಗವಹಿಸಿದ್ದರು. ಹೀಗಾಗಿ ಇವರೆಲ್ಲರಿಗೂ ಈಗ ಕೊರೊನಾ ಭಯ ಆರಂಭವಾಗಿದೆ.

ಇನ್ನೊಂದೆಡೆ ಸತ್ಯೇಂದ್ರ ಜೈನ್‌ ಅಲ್ಲದೆ ಎಎಪಿ ಮೂವರು ಶಾಸಕರಿಗೂ ಕೊರೊನಾ ಸೋಂಕು ತಗುಲಿದ್ದು ಅವರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ