ಆ್ಯಪ್ನಗರ

ಜಾಮೀಯಾ ವಿದ್ಯಾರ್ಥಿಗಳ ಮೇಲೆ ಫೈರಿಂಗ್ ; ಸುಮ್ಮನಿದ್ದ ಪೊಲೀಸರ ವರ್ತನೆಗೆ ನೆಟ್ಟಿಗರ ಆಕ್ರೋಶ

ದೆಹಲಿಯಲ್ಲಿ ಜಾಮೀಯಾ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಯೊಬ್ಬ ಹಾಡಹಗಲೇ ಗುಂಡು ಹಾರಿಸಿದ್ದಾನೆ. ಅದೂ ದೆಹಲಿ ಪೊಲೀಸರ ಸಮ್ಮುಖದಲ್ಲೇ. ಘಟನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ಪೊಲೀಸರ ವರ್ತನೆಗೂ ಖಂಡನೆ ವ್ಯಕ್ತವಾಗುತ್ತಿದೆ.

Vijaya Karnataka Web 30 Jan 2020, 4:47 pm
ಹೊಸ ದೆಹಲಿ: ದೆಹಲಿಯ ಜಾಮೀಯಾ ವಿವಿ ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ದುಷ್ಕರ್ಮಿ ಯೊಬ್ಬ ವಿದ್ಯಾರ್ಥಿಗಳ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದು ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಯಾವುದೇ ಕ್ರಮ ಕೈಗೊಳ್ಳದೇ ಇದ್ದಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.
Vijaya Karnataka Web man opened fire in jamia student protest police behavior questioned by social media
ಜಾಮೀಯಾ ವಿದ್ಯಾರ್ಥಿಗಳ ಮೇಲೆ ಫೈರಿಂಗ್ ; ಸುಮ್ಮನಿದ್ದ ಪೊಲೀಸರ ವರ್ತನೆಗೆ ನೆಟ್ಟಿಗರ ಆಕ್ರೋಶ



ಸಾಮಾಜಿಕ ಜಾಲತಾಣಗಳಲ್ಲಿ ದೆಹಲಿ ಪೊಲೀಸರ ನಡೆಗೆ ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಹಾತ್ಮ ಗಾಂಧಿ ಹುತಾತ್ಮ ದಿನವಾದ ಗುರುವಾರದಂದು ದೆಹಲಿಯ ರಾಜ್ ಘಾಟ್‌ನಲ್ಲಿ ಜಾಮೀಯಾ ವಿವಿ ವಿದ್ಯಾರ್ಥಿಗಳು ಮೆರವಣಿಗೆ ನಡೆಸುತ್ತಿದ್ದರು.

ವಿಡಿಯೋ: ಸಿಎಎ ವಿರೋಧಿ ಹೋರಾಟಗಾರರ ಮೇಲೆ ಗುಂಡೇಟು..! ಪೊಲೀಸರ ಎದುರೇ ದುಷ್ಕರ್ಮಿ ಆರ್ಭಟ..!

ಪೌರತ್ವ ಕಾಯ್ದೆ ತಿದ್ದುಪಡಿ ಹಾಗೂ ಎನ್‌ಆರ್‌ಸಿ ವಿರೋಧಿಸಿ ಈ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ಮೆರವಣಿಗೆಯ ಮುಂಭಾಗಕ್ಕೆ ಬಂದ ವ್ಯಕ್ತಿಯೊಬ್ಬ ತನ್ನಲ್ಲಿದ್ದ ಪಿಸ್ತೂಲನ್ನು ತೋರಿಸಿ ಬೆದರಿಕೆ ಒಡ್ಡಿದ. ಬಳಿಕ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


ದುಷ್ಕರ್ಮಿ ಗುಂಡು ಹಾಕಿಸುತ್ತಿದ್ದ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿ ಪೊಲೀಸರ ಇದ್ದರೂ ತಕ್ಷಣ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಕೆಲ ಹೊತ್ತಿನ ಬಳಿಕ ಆತನನ್ನು ವಶಕ್ಕೆ ಪಡೆದುಕೊಂಡರು ಎಂಬುವುದು ಪ್ರತಿಭಟನಾಕಾರರ ಆರೋಪವಾಗಿದೆ.


ಈ ವಿಚಾರ ಟ್ವಿಟ್ಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಚರ್ಚೆಗೆ ಗ್ರಾಸವಾಗಿದೆ. ಪಿಸ್ತೂಲ್‌ ಹಿಡಿದುಕೊಂಡು ದುಷ್ಕರ್ಮಿಯೊಬ್ಬ ರಾಜಾರೋಷವಾಗಿ ವಿದ್ಯಾರ್ಥಿಗಳನ್ನು ಬೆದರಿಸಿದ್ದಲ್ಲದೆ ಗುಂಡು ಹಾರಿಸಿದರೂ ಪೊಲೀಸರು ತಕ್ಷಣ ಆತನನ್ನು ವಶಕ್ಕೆ ಪಡೆದುಕೊಳ್ಳದೇ ಇರುವುದನ್ನು ನೆಟ್ಟಿಗರು ಪ್ರಶ್ನಿಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಕೂಡಾ ಘಟನೆಯನ್ನು ಖಂಡಿಸಿದ್ದು ಪೊಲೀಸರ ವರ್ತನೆಯನ್ನು ಪ್ರಶ್ನಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ