ಆ್ಯಪ್ನಗರ

ಜನತಾ ಕರ್ಫ್ಯೂ ಮಧ್ಯೆಯೇ ಶಾಹೀನ್ ಬಾಗ್ ಪ್ರತಿಭಟನೆ ಸ್ಥಳದಲ್ಲಿ ಪೆಟ್ರೋಲ್ ಬಾಂಬ್ ಎಸೆತ!

ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಇಡೀ ದೇಶ ಒಟ್ಟಾಗಿ ಜನತಾ ಕರ್ಫ್ಯೂ ಆಚರಿಸುತ್ತಿದೆ. ಆದರೆ ಶಾಹೀನ್ ಬಾಗ್ ಸಿಎಎ ವಿರೋಧಿ ಪ್ರತಿಭಟನೆ ಹಾಗೂ ಪ್ರತಿಭಟನೆಯನ್ನು ವಿರೋಧಿಸುವವರ ನಡುವಿನ ಜಟಾಪಟಿ ಮಾತ್ರ ನಿಂತಿಲ್ಲ. ಇದಕ್ಕೆ ಪಷ್ಠಿ ಎಂಬಂತೆ ಶಾಹೀನ್ ಬಾಗ್ ಪ್ರತಿಭಟನಾ ಸ್ಥಳದಲ್ಲಿ ಆಗುಂತುಕರು ಪೆಟ್ರೋಲ್ ಬಾಂಬ್ ಎಸೆದ ಘಟನೆ ನಡೆದಿದೆ.

Vijaya Karnataka Web 22 Mar 2020, 8:39 pm
ನವದೆಹಲಿ: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಜನತಾ ಕರ್ಫ್ಯೂ ಆಚರಿಸಲಾಗುತ್ತಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ದೈನಂದಿನ ವ್ಯವಹಾರಗಳು ದೇಶಾದ್ಯಂತ ಸ್ಥಗಿತಗೊಂಡಿವೆ.
Vijaya Karnataka Web Shaheen Bagh
ಶಾಹೀನ್ ಬಾಗ್ ಸಿಎಎ ವಿರೋಧಿ ಪ್ರತಿಭಟನಾ ಸ್ಥಳದಲ್ಲಿ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.


ಆದರೆ ಶಾಹೀನ್ ಬಾಗ್ ಸಿಎಎ ವಿರೋಧಿ ಪ್ರತಿಭಟನೆ ಮಾತ್ರ ಇದಕ್ಕೆ ತದ್ವಿರುದ್ಧ. ಜನತಾ ಕರ್ಫ್ಯೂ ನಡುವೆಯೂ ದೆಹಲಿಯ ಶಾಹೀನ್ ಬಾಗ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ಮುಂದುವರೆದಿದ್ದು, ಪ್ರತಿಭಟನಾ ವಿರೋಧಿ ಗುಂಪೊಂದು ಪ್ರತಿಭಟನಾ ಸ್ಥಳದಲ್ಲಿ ಪೆಟ್ರೋಲ್ ಬಾಂಬ್ ಎಸೆದ ಘಟನೆ ನಡೆದಿದೆ.


ಶಾಹೀನ್ ಬಾಗ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಆಗುಂತುಕರ ಗುಂಪೊಂದು, ಗೇಟ್‌ನ ಮುಂಭಾಗದಲ್ಲಿ ಪೆಟ್ರೋಲ್ ಬಾಂಬ್ ಎಸೆದು ಪರಾರಿಯಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಪೆಟ್ರೋಲ್ ಬಾಂಬ್ ಪ್ರತಿಭಟನಾ ಸ್ಥಳದ ಮುಂಭಾಗದಲ್ಲಿದ್ದ ಪೊಲೀಸ್ ಬ್ಯಾರಿಕೇಡ್‌ಗೆ ತಗುಲಿ ಅಲ್ಲೇ ಸ್ಫೋಟಗೊಂಡ ಪರಿಣಾಮ, ಯಾರಿಗೂ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಖಾಲಿಯಾಗ್ತಿದೆ ಶಾಹೀನ್ ಬಾಗ್: ಕೊರೊನಾ ನೆರಳಲ್ಲಿ ಮರೆಯಾಯ್ತು ಸಿಎಎ ಮೇಲಿನ ಸಿಟ್ಟು!

ಇದೇ ವೇಳೆ ಜಾಮಿಯಾ ವಿಶ್ವವಿದ್ಯಾಲಯದ ಬಳಿಯೂ ಆಗುಂತುಕರು ಪೆಟ್ರೋಲ್ ಬಾಂಬ್ ಎಸೆದಿದ್ದು, ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಜನರಿಲ್ಲದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ