ಆ್ಯಪ್ನಗರ

ಯುಎಇ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಯಿಂದ ನ.12ಕ್ಕೆ ಕನ್ನಡ ರಾಜ್ಯೋತ್ಸವ: ಸಚಿವರು ಭಾಗಿ

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಹಾಗೂ ಇಂಧನ ಸಚಿವರಾದ ಸುನೀಲ್‌ ಕುಮಾರ್‌ ಕಾರ್ಕಳ ಹಾಗೂ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Vijaya Karnataka Web 1 Oct 2021, 10:15 pm
ದುಬೈ: ಸಂಯುಕ್ತ ಅರಬ್‌ ಸಂಸ್ಥಾನ (ಯುಎಇ)ದ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಹಾಗೂ ಯುಎಇಯಲ್ಲಿ ಕಾರ್ಯೋನ್ಮುಖವಾಗಿರುವ ಕನ್ನಡ ಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ 2021ರ ನವೆಂಬರ್‌ 12 ರಂದು 66ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.
Vijaya Karnataka Web ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ


ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಹಾಗೂ ಇಂಧನ ಸಚಿವರಾದ ಸುನೀಲ್‌ ಕುಮಾರ್‌ ಕಾರ್ಕಳ ಹಾಗೂ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್‌ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇಂಡಿಯನ್‌ ಸ್ಕೂಲ್‌ ಆಫ್ ದುಬೈನ ಶೇಖ್‌ ರಾಶಿದ್‌ ಸಭಾಂಗಣದಲ್ಲಿ ಮಧ್ಯಾಹ್ನ 3.00 ಗಂಟೆಯಿಂದ ಈ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ- ಯುಎಇ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮದ ಕರೆಯೋಲೆ


ಕಾರ್ಯಕ್ರಮಕ್ಕೆ ಆಗಮಿಸುವವರು ಮುಂಗಡವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಸಂಘಟಕರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅನಿವಾಸಿ ಕನ್ನಡಿಗರು ಭಾಗಿಯಾಗಬೇಕು ಎಂದು ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಹಾಗೂ ಯುಎಇ ಇದರ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಶೆಟ್ಟಿ ಹಾಗೂ ಯುಎಇಯಲ್ಲಿರುವ ಎಲ್ಲಾ ಕನ್ನಡ ಪರ ಸಂಘಟನೆಯ ಮುಖ್ಯಸ್ಥರು ಆಹ್ವಾನ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ