ಆ್ಯಪ್ನಗರ

ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ

ರಾಜ್ಯ ಸರಕಾರ ಭೋವಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಕ್ಕೆ ಭೋವಿ ಅಭಿವೃದ್ಧಿ ನಿಗಮವನ್ನು ಮೀಸಲಾಗಿರಿಸಿ ಸ್ಥಾಪಿಸಲು ಮುಂದಾಗಿರುವ ಕ್ರಮವನ್ನು ವಿರೋಧಿಸಿರುವ ಇಲ್ಲಿನ ಭೋವಿ ಸಮಾಜದವರು ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿದ್ದಾರೆ.

ವಿಕ ಸುದ್ದಿಲೋಕ 25 Feb 2016, 6:53 am
ರಾಯಚೂರು; ರಾಜ್ಯ ಸರಕಾರ ಭೋವಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಕ್ಕೆ ಭೋವಿ ಅಭಿವೃದ್ಧಿ ನಿಗಮವನ್ನು ಮೀಸಲಾಗಿರಿಸಿ ಸ್ಥಾಪಿಸಲು ಮುಂದಾಗಿರುವ ಕ್ರಮವನ್ನು ವಿರೋಧಿಸಿರುವ ಇಲ್ಲಿನ ಭೋವಿ ಸಮಾಜದವರು ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿದ್ದಾರೆ.
Vijaya Karnataka Web
ಭೋವಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಒತ್ತಾಯ


ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಭೋವಿ(ವಡ್ಡರ) ಸಮಾಜದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳಲ್ಲಿ ಮಾತ್ರ ಭೋವಿ ಅಭಿವೃದ್ಧಿ ನಿಗಮ ಸ್ಥಾಪಿಸಲು ಸರಕಾರ ಮುಂದಾಗಿರುವುದು ಸರಿಯಾದ ಕ್ರಮವಲ್ಲ.ಅದರಿಂದ ಉಳಿದ ಜಿಲ್ಲೆಗಳಲ್ಲಿರುವ ಭೋವಿ ಸಮುದಾಯದವರಿಗೆ ಅನ್ಯಾಯವಾಗಲಿದೆ ಎಂದು ಆಕ್ಷೇಪಿಸಿದರು.

ಕಳೆದ ತಿಂಗಳು 18 ರಂದು ಏರ್ಪಡಿಸಿದ್ದ ರಾಜ್ಯ ಮಟ್ಟದ ಭೋವಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಭೋವಿ ಸಮಾಜದ ಸಮಗ್ರ ಅಭಿವೃದ್ಧಿ ಉದ್ದೇಶದಿಂದ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದ್ದರು. ನಂತರ ನಡೆದ ಸಚಿವ ಸಂಪುಟ ಸಭೆಯಲ್ಲಿ ಭೋವಿ ಸಮಾಜದ ನಿಗಮ ಮಂಡಳಿ ಸ್ಥಾಪಿಸಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಸರಕಾರವು ನಿಗಮವನ್ನು ರಾಜ್ಯಕ್ಕೆ ಅನ್ವಯಿಸುವಂತೆ ಸ್ಥಾಪಿಸಲು ಆಸಕ್ತಿ ತೋರದಿರುವುದು ಬೇಸರ ತಂದಿದೆ ಎಂದ ಅವರು, ಜನ ಸಂಖ್ಯೆಗನುಗುಣವಾಗಿ ಕೇವಲ 11 ಜಿಲ್ಲೆಗಳಲ್ಲಿ ಮಾತ್ರ ನಿಗಮ ಮಂಡಳಿ ಸ್ಥಾಪನೆಗೆ ಮುಂದಾಗಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ, ಕೂಡಲೇ ಸರಕಾರ ತನ್ನ ನಿರ್ಧಾರ ಬದಲಿಸಿ ರಾಜ್ಯಕ್ಕೆ ಒಂದೇ ಇಂಥ ನಿಗಮ ಸ್ಥಾಪಿಸಬೇಕೆಂದು ಆಗ್ರಹಿಸಿದರು.

ಮುಖಂಡರಾದ ಎನ್.ಯಂಕಪ್ಪ, ಹನುಮಂತು, ಶಶಿಕಲಾ ಭೀಮರಾಯ, ಯಲ್ಲಪ್ಪ, ಎಮ್.ಸುರೇಶ ಬಾಬು, ವೆಂಕಟಪ್ಪ ಸೇರಿ ಅನೇಕರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ