ಆ್ಯಪ್ನಗರ

‘ ಅವಕಾಶ ಸದ್ಭಳಕೆ ಮಾಡಿಕೊಳ್ಳಿ’

ಮಹಿಳೆಯರು ನಾಲ್ಕು ಗೋಡೆಗಳ ಮಧ್ಯೆ ಸೀಮಿತವಾಗದೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಿಂಧನೂರು ನಗರಸಭಾ ಅಧ್ಯಕ್ಷೆ ಮಂಜುಳಾ ಪಾಟೀಲ್ ಹೇಳಿದರು.

ವಿಕ ಸುದ್ದಿಲೋಕ 30 Mar 2016, 6:46 am
ರಾಯಚೂರು; ಮಹಿಳೆಯರು ನಾಲ್ಕು ಗೋಡೆಗಳ ಮಧ್ಯೆ ಸೀಮಿತವಾಗದೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಸಾಧನೆ ಮಾಡಬೇಕು ಎಂದು ಸಿಂಧನೂರು ನಗರಸಭಾ ಅಧ್ಯಕ್ಷೆ ಮಂಜುಳಾ ಪಾಟೀಲ್ ಹೇಳಿದರು.
Vijaya Karnataka Web
‘ ಅವಕಾಶ ಸದ್ಭಳಕೆ ಮಾಡಿಕೊಳ್ಳಿ’


ನಗರದ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ, ಕನ್ನಡ ಜಾನಪದ ಪರಿಷತ್ ಹಾಗೂ ನಾನಾ ಮಹಿಳಾ ಸಂಘಟನೆಗಳ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಜಾನಪದ ಗೀತೆಗಳ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆಯರು ಸರಕಾರದ ಸೌಲಭ್ಯಗಳನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು. ಪ್ರತಿಯೊಂದು ರಂಗದಲ್ಲಿಯೂ ಒಗ್ಗಟ್ಟಾಗಿ ಪರಸ್ಪರ ಸಹಕಾರ ಮನೋಭಾವದಿಂದ ಸಾಧನೆಗೈಯ್ಯಬೇಕು ಎಂದರು.

ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವೀರಶೈವ ಮಹಾಸಭಾ ಜಿಲ್ಲಾ ಘಟಕ ಸಮಾಜ ಅಧ್ಯಕ್ಷ ಭೀಮರೆಡ್ಡಿ, ಎಎಂಇ ಕಾಲೇಜಿನ ಉಪನ್ಯಾಸಕ ವಿದ್ಯಾ ಮಾಲಿಪಾಟೀಲ್, ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಘಟಕ ಅಧ್ಯಕ್ಷೆ ದಾನಮ್ಮ ಸುಭಾಶ್ಚಂದ್ರ, ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ದಂಡಪ್ಪ ಬಿರಾದಾರ, ಶರಣಬಸವ ಅರಳ, ಕೆ.ಎಂ.ಪಾಟೀಲ್ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ