ಆ್ಯಪ್ನಗರ

‘ಮಳೆಯಾಶ್ರಿತ ಪ್ರದೇಶಕ್ಕೆ ಆದ್ಯತೆ ನೀಡಿ’

ಮಳೆಯಾಶ್ರಿತ ಪ್ರದೇಶದ ರೈತರ ಸಮಸ್ಯೆ ಪರಿಹರಿಸಲು, ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ್ ಅನ್ವರಿ ಸರಕಾರವನ್ನು ಒತ್ತಾಯಿಸಿದರು.

ವಿಕ ಸುದ್ದಿಲೋಕ 9 Mar 2017, 7:26 am
ಮಸ್ಕಿ: ಮಳೆಯಾಶ್ರಿತ ಪ್ರದೇಶದ ರೈತರ ಸಮಸ್ಯೆ ಪರಿಹರಿಸಲು, ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲ್ ಅನ್ವರಿ ಸರಕಾರವನ್ನು ಒತ್ತಾಯಿಸಿದರು.
Vijaya Karnataka Web
‘ಮಳೆಯಾಶ್ರಿತ ಪ್ರದೇಶಕ್ಕೆ ಆದ್ಯತೆ ನೀಡಿ’


ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಸರಕಾರ ಈಗಾಗಲೇ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಸತತ ಬರಗಾಲದಿಂದ ತತ್ತರಿಸಿದ ಜನರಿಗೆ ಈ ವರ್ಷದ ಬಜೆಟ್‌ನಲ್ಲಿ ಆಯಾ ಇಲಾಖೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ, ಸಂಬಂಧಿಸಿದ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಸತತ ಕಳೆದ ಮೂರ‌್ನಾಲ್ಕು ವರ್ಷಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಅಂತರ್ಜಲ ಕುಸಿದಿದೆ. ಇರುವ ಕೊಳವೆಬಾವಿಗಳಲ್ಲಿ ನೀರು ಇಲ್ಲದಂತಾಗಿದೆ. ಕೆಲ ಕೊಳವೆಬಾವಿಯಲ್ಲಿ ನೀರಿನ ಅನುಕೂಲತೆ ಇದ್ದರೂ ಹನಿ ನೀರಾವರಿ, ಸಣ್ಣ ನೀರಾವರಿ ಸಾಮಗ್ರಿಗಳು ದುರಸ್ತಿಗೆ ಬಂದ ಪರಿಣಾಮ ರೈತರಿಗೆ ಸಂಕಷ್ಟ ಎದುರಾಗಿದೆ. ಕೂಡಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸರಕಾರ ರೈತರ ನೆರವಿಗೆ ಬರಬೇಕು ಎಂದರು.

ಸಾಲಮನ್ನಾ ಮಾಡಿ: ಹಿಂಗಾರು, ಮುಂಗಾರು ಹಂಗಾಮಿನಲ್ಲಿ ಬೆಳೆ ಕಳೆದುಕೊಂಡು ಜೀವನ ನಿರ್ವಹಣೆಗೆ ರೈತರು ಏದುಸಿರುಬಿಡುತ್ತಿದ್ದಾರೆ. ಮಳೆಯಾಶ್ರಿತ ಪ್ರದೇಶದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ವಿಕೋಪಕ್ಕೆ ತಿರುಗುತ್ತಿದ್ದು, ವಿಳಂಬ ಧೋರಣೆ ಅನುಸರಿಸದೇ ಕ್ರಮಕ್ಕೆ ಮುಂದಾಗಬೇಕು. ಆರ್ಥಿಕ ತೊಂದರೆಯಿಂದ ಬಳಲುತ್ತಿರುವ ರೈತರ ಸಾಲವನ್ನು ಸರಕಾರ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕು, ಸರ್ವೆ ನಡೆಸಿ ಬೆಳೆ ಪರಿಹಾರ ನೀಡಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಅನ್ವರಿ ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ