ಆ್ಯಪ್ನಗರ

ಕ್ಷಮೆಯಾಚಿಸದಿದ್ದರೆ ಬಿಎಸ್‌ವೈ, ಶೋಭಾ ಕರಂದ್ಲಾಜೆಗೆ ಮುತ್ತಿಗೆ

ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು, ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದರೆ ಅವರು ಭೇಟಿ ನೀಡುವ ರಾಜ್ಯದ ಎಲ್ಲ ಸ್ಥಳಗಳಲ್ಲಿ ಅವರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಎಚ್ಚರಿಸಿದರು.

ವಿಕ ಸುದ್ದಿಲೋಕ 8 Jul 2017, 8:17 am
ಸಿಂಧನೂರು (ರಾಯಚೂರು): ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು, ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲವಾದರೆ ಅವರು ಭೇಟಿ ನೀಡುವ ರಾಜ್ಯದ ಎಲ್ಲ ಸ್ಥಳಗಳಲ್ಲಿ ಅವರಿಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ಎಚ್ಚರಿಸಿದರು.
Vijaya Karnataka Web
ಕ್ಷಮೆಯಾಚಿಸದಿದ್ದರೆ ಬಿಎಸ್‌ವೈ, ಶೋಭಾ ಕರಂದ್ಲಾಜೆಗೆ ಮುತ್ತಿಗೆ


ಇಲ್ಲಿನ ಸರ್ಕ್ಯೂಟ್‌ಹೌಸ್‌ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ಯಡಿಯೂರಪ್ಪನವರು ಬೇರೊಬ್ಬರ ಬಗ್ಗೆ ಮಾತನಾಡುವ ಮೊದಲು ಯೋಚಿಸಬೇಕು. ಮುಖ್ಯಮಂತ್ರಿಯಾಗಿದ್ದಾಗಲೇ ಜೈಲಿಗೆ ಹೋಗಿ ಬಂದಿರುವ ಅವರು, ಇದೀಗ ಕಾಂಗ್ರೆಸ್ ಯುವ ನಾಯಕರ ಬಗ್ಗೆ ಅವಹೇಳನ ಮಾಡುವುದು ಸರಿಯಲ್ಲ. ಅವರು ರಾಹುಲ್ ಗಾಂಧಿ ಅವರ ಕ್ಷಮೆಯಾಚಿಸದಿದ್ದರೆ, ಯುವ ಕಾಂಗ್ರೆಸ್ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು’’ ಎಂದರು.

ಬಿಜೆಪಿ ಸಂಸದರ ಮನೆಗೆ ಮುತ್ತಿಗೆ: ‘‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ, ರೈತ ಹಾಗೂ ಜನಪರ ಕಾಳಜಿ ಹೊಂದಿದೆ. ಬರಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯವರು, ಸಹಕಾರಿ ಸಂಘಗಳಲ್ಲಿ ರೈತರು ಮಾಡಿದ 50 ಸಾವಿರ ರೂ.ವರೆಗಿನ ಸಾಲಮನ್ನಾ ಮಾಡಿದ್ದಾರೆ. ಆದರೆ, ಕೇಂದ್ರದ ಬಿಜೆಪಿ ಸರಕಾರ ರೈತರ ಸಾಲಮನ್ನಾಕ್ಕೆ ಮುಂದಾಗಿಲ್ಲ. ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ಕೇಂದ್ರ ಸರಕಾರ ಈ ಹಿಂದೆಯೇ ಸಾಲಮನ್ನಾ ಮಾಡುತ್ತಿತ್ತು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾಗೆ ಆಗ್ರಹಿಸಿ, ಜು.10ರಂದು ರಾಜ್ಯದ ಬಿಜೆಪಿ ಸಂಸದರ ಮನೆಗೆ ಯುವ ಕಾಂಗ್ರೆಸ್‌ನಿಂದ ಮುತ್ತಿಗೆ ಹಾಕಲಾಗುವುದು. ನಂತರ 224 ವಿಧಾನಸಭೆ ಕ್ಷೇತ್ರಗಳಲ್ಲಿ ಇರುವ ರಾಷ್ಟ್ರೀಯ ಬ್ಯಾಂಕ್‌ಗಳಿಗೂ ಮುತ್ತಿಗೆ ಹಾಕಲಾಗುವುದು’’ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ