ಆ್ಯಪ್ನಗರ

‘ಎಸ್‌ಐಟಿ ವರದಿ ಅಸಮಾಧಾನ ತಂದರೆ ಸುಪ್ರೀಂಗೆ ಮೊರೆ’

ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಅವರು ಗಣಿಗಾರಿಕೆ ಕುರಿತು ನೀಡಿರುವ ವರದಿ ಸದ್ಯ ಎಸ್‌ಐಟಿ ಮುಂದಿದೆ. ಒಂದು ವೇಳೆ ಎಸ್‌ಐಟಿ ತನಿಖೆ ಸಮಾಧಾನ ತರದಿದ್ದರೆ ಲೋಕಾಯುಕ್ತದಿಂದ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಬಹುದಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಹೇಳಿದರು.

ವಿಕ ಸುದ್ದಿಲೋಕ 11 Jul 2017, 8:23 am
ರಾಯಚೂರು; ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಅವರು ಗಣಿಗಾರಿಕೆ ಕುರಿತು ನೀಡಿರುವ ವರದಿ ಸದ್ಯ ಎಸ್‌ಐಟಿ ಮುಂದಿದೆ. ಒಂದು ವೇಳೆ ಎಸ್‌ಐಟಿ ತನಿಖೆ ಸಮಾಧಾನ ತರದಿದ್ದರೆ ಲೋಕಾಯುಕ್ತದಿಂದ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಬಹುದಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಹೇಳಿದರು.
Vijaya Karnataka Web
‘ಎಸ್‌ಐಟಿ ವರದಿ ಅಸಮಾಧಾನ ತಂದರೆ ಸುಪ್ರೀಂಗೆ ಮೊರೆ’


ಇಲ್ಲಿನ ಜಿ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‘ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಸ್‌ಐಟಿ ರಚನೆಯಾಗಿದೆ. ಎಸ್‌ಐಟಿ ತನಿಖೆಯಲ್ಲಿ ಲೋಕಾಯುಕ್ತ ಸಂಸ್ಥೆ ಹಸ್ತಕ್ಷೇಪ ಮಾಡಲಾಗದು’’ ಎಂದರು.

ಶಿಫಾರಸಿಗೆ ಅವಕಾಶ: ‘‘ಎಸಿಬಿ ರಚನೆ ನಂತರ ಅಕ್ರಮ ಆಸ್ತಿ ಪ್ರಕರಣಗಳಲ್ಲಿ ಲೋಕಾಯುಕ್ತರಿಗೆ ದಾಳಿ ನಡೆಸುವ ಅಧಿಕಾರವಿಲ್ಲ. ಸೂಕ್ತ ದಾಖಲೆ ನೀಡಿದರೆ ತನಿಖೆ ನಡೆಸಲು ಎಸಿಬಿಗೆ ಶಿಫಾರಸು ಮಾಡಲು ಅವಕಾಶವಿದೆ’’ ಎಂದ ಅವರು, ‘‘ತಾವು ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಳ್ಳುವ ಮುಂಚೆ ಒಟ್ಟು 6500 ಪ್ರಕರಣಗಳ ವಿಚಾರಣೆ ಬಾಕಿಯಿತ್ತು. ಸಾಕಷ್ಟು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಸದ್ಯ 2400 ಪ್ರಕರಣಗಳ ವಿಚಾರಣೆ ಬಾಕಿಯಿದೆ. ತನಿಖೆ ಪೂರ್ಣಗೊಂಡು ವರದಿ ಬಂದಿದ್ದ 25 ಪ್ರಕರಣಗಳನ್ನು ವಿಳಂಬಮಾಡದೆ ಮುಗಿಸಲಾಗಿದೆ’’ ಎಂದು ತಿಳಿಸಿದರು.

ಹುದ್ದೆ ಭರ್ತಿಗೆ ಪ್ರಸ್ತಾವನೆ: ‘‘ಲೋಕಾಯುಕ್ತ ಸಂಸ್ಥೆಯಲ್ಲಿ ಹೆಚ್ಚಿನ ಕೆಲಸವಿದೆ. ಖಾಲಿಯಿರುವ 9 ತನಿಖಾಧಿಕಾರಿ ಹಾಗೂ ಅಗತ್ಯ ಸಿಬ್ಬಂದಿ ಹುದ್ದೆಗಳನ್ನು ಭರ್ತಿಮಾಡುವಂತೆ ಮೂರು ತಿಂಗಳ ಹಿಂದೆಯೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿ ಸರಕಾರ ಕೇಳಿದ ವಿವರಣೆ ನೀಡಲಾಗಿದೆ. ಖಾಲಿ ಹುದ್ದೆಗಳ ಭರ್ತಿಯಿಂದ ಕೆಲಸದ ಹೊರೆ ಕಡಿಮೆಯಾಗಲಿದೆ. ತನಿಖೆಯನ್ನು ಸಮರ್ಪಕವಾಗಿ ನಿರ್ವಹಿಸಲು ನೆರವಾಗಲಿದೆ’’ ಎಂದು ಲೋಕಾಯುಕ್ತ ನ್ಯಾ. ಪಿ.ವಿಶ್ವನಾಥ ಶೆಟ್ಟಿ ಹೇಳಿದರು.

17 ಜಿಲ್ಲೆಗಳಲ್ಲಿ ಪ್ರವಾಸ ಪೂರ್ಣ: ‘‘ಕೇಂದ್ರ ಮತ್ತು ರಾಜ್ಯ ಸರಕಾರಗಳ ಪ್ರಮುಖ ಯೋಜನೆಗಳನ್ನು ಶ್ರದ್ಧೆ, ನಿಷ್ಠೆ ಹಾಗೂ ತ್ವರಿತಗತಿಯಲ್ಲಿ ಜನರಿಗೆ ತಲುಪಿಸುವ ಹಾಗೂ ಪಾರದರ್ಶಕ ಆಡಳಿತ ನಿರ್ಮಾಣ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಇದುವರೆಗೆ 17 ಜಿಲ್ಲೆಗಳಲ್ಲಿ ಪ್ರವಾಸ ಪೂರ್ಣಗೊಂಡಿದೆ’’ ಎಂದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಎಡಿಜಿಪಿ ಪರಮಶಿವಮೂರ್ತಿ, ಡಿಸಿ ಡಾ.ಬಗಾದಿ ಗೌತಮ್, ಜಿ.ಪಂ. ಸಿಇಒ ಎಂ.ಕೂರ್ಮಾರಾವ್ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ