ಆ್ಯಪ್ನಗರ

ಅಕ್ರಮ ಕಟ್ಟಡ ತೆರವುಗೊಳಿಸಲು ಡಿಸಿಗೆ ಮನವಿ

ಸರಕಾರಿ ಜಮೀನಿನಲ್ಲಿನ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಖುದ್ದಾಗಿ ಪರಿಶೀಲಿಸಿ, ಭೂ ಕಬಳಿಕೆದಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ, ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ವಿಕ ಸುದ್ದಿಲೋಕ 1 Aug 2017, 7:44 am
ರಾಯಚೂರು: ಸರಕಾರಿ ಜಮೀನಿನಲ್ಲಿನ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಖುದ್ದಾಗಿ ಪರಿಶೀಲಿಸಿ, ಭೂ ಕಬಳಿಕೆದಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ, ಸರಕಾರಿ ಭೂಮಿ ಉಳಿಸಿ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
Vijaya Karnataka Web
ಅಕ್ರಮ ಕಟ್ಟಡ ತೆರವುಗೊಳಿಸಲು ಡಿಸಿಗೆ ಮನವಿ


ನಗರದಲ್ಲಿನ ಸರ್ವೆ ನಂ.33 ರಲ್ಲಿ 39ಎಕರೆ 22ಗುಂಟೆಯಲ್ಲಿ 4ಎಕರೆ ಜಮೀನನ್ನು ಅಕ್ರಮವಾಗಿ ಭೂಕಬಳಿಕೆ ನಡೆಸಲಾಗಿತ್ತು. ಜಿಲ್ಲಾಧಿಕಾರಿಗಳು ದಾಖಲಾತಿ ಪರಿಶೀಲಿಸಿ ಕಬಳಿಕೆ ಜಾಗದಲ್ಲಿ ಅಕ್ರಮವಾಗಿ ಕಟ್ಟಿದ ಚಿತ್ರಮಂದಿರವನ್ನು ರದ್ಧುಗೊಳಿಸುವಂತೆ ನಗರಸಭೆಗೆ ನಿರ್ದೇಶಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಆದರೆ ನಗರಸಭೆಯೇ ಈ ಅಕ್ರಮ ಭೂಕಬಳಿಕೆದಾರರ ಬೆನ್ನೆಲುಬಾಗಿ ನಿಂತಿದೆ. ಹೀಗಾಗಿ ಕಬಳಿಕೆದಾರರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ಕಾಣುತ್ತಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳೇ ಭೂಕಬಳಿಕೆ ಮಾಡಿಕೊಂಡಿರುವವರ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಪದಾಧಿಕಾರಿಗಳಾದ ಎಂ.ಮಾರೆಪ್ಪ, ಶಾಂತಕುಮಾರ, ಪ್ರಾಣೇಶ, ಶ್ರೀನಿವಾಸ ಕೊಪ್ಪರ, ನರಸಿಂಹಲು, ವಿಶ್ವನಾಥಪಟ್ಟಿ, ಕೆ.ಈರಣ್ಣ ಸೇರಿದಂತೆ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ