ಆ್ಯಪ್ನಗರ

ರಾಯಚೂರು: ಜು.2ರಂದು ಜಿಲ್ಲೆಯಲ್ಲಿ 11 ಮಂದಿಗೆ ಕೊರೊನಾ ದೃಢ!

ಜು.2ರ ಗುರುವಾರ ಜಿಲ್ಲೆಯಲ್ಲಿ ಒಟ್ಟು 11 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ರಾಯಚೂರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 511 ಜನರಿಗೆ ಕೊರೊನಾ ಸೋಂಕು ದೃಢಪಟ್ಟಂತಾಗಿದೆ. ಈವರೆಗೆ 404 ಕರೊನಾ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದಾರೆ.

Vijaya Karnataka Web 2 Jul 2020, 6:32 pm
ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಜು.2ರ ಗುರುವಾರ ಜಿಲ್ಲೆಯಲ್ಲಿ ಒಟ್ಟು 11 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ರಾಯಚೂರು ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 511 ಜನರಿಗೆ ಕೊರೊನಾ ಸೋಂಕು ದೃಢಪಟ್ಟಂತಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಹೋಗುತ್ತಿದ್ದರು ಗುಣಮುಖರ ವಿಚಾರದಲ್ಲಿ ಜಿಲ್ಲೆ ಹಿಂದೆ ಬಿದ್ದಿಲ್ಲ.
Vijaya Karnataka Web jpg (42)


ಈವರೆಗೆ 404 ಕರೊನಾ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ತೆರಳಿದ್ದಾರೆ. ಸದ್ಯ ಈಗ ಕೋವಿಡ್ ಆಸ್ಪತ್ರೆಯಲ್ಲಿ 102 ಸಕ್ರಿಯ ಪ್ರಕರಣಗಳಿವೆ. ಇಂದು 442 ಜನರ ಮಾದರಿ ಸಂಗ್ರಹ ಮಾಡಲಾಗಿದ್ದು, ಜಿಲ್ಲೆಯಿಂದ ಈವರೆಗೆ ಒಟ್ಟು 24,070 ಮಂದಿಯ ಮಾದರಿ ಲ್ಯಾಬ್ ಗೆ ರವಾನೆ ಮಾಡಲಾಗಿದೆ. ಇಂದು 152 ಜನರು ಸೇರಿ, 22,006 ವರದಿ ನೆಗೆಟಿವ್ ಬಂದಿದೆ.

ಇನ್ನೂ 547 ಮಾದರಿಯ ವರದಿಗಳು ಬರಬೇಕಾಗಿದೆ. ಜಿಲ್ಲೆಯಲ್ಲಿ ಲಾಕ್‌ಡೌನ್‌ ಸಡಿಲಿಕೆ ನಂತರ ಕೊರೊನಾ ಸೋಂಕಿತರ ಸಂಖ್ಯೆ ಏರಿಕಯಾಗುತ್ತಲೇ ಇದೆ. ರಾಜ್ಯದಲ್ಲೂ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ಸಮುದಾಯಕ್ಕೆ ಸೋಂಕು ಹರಡಿದೆಯೇ ಎನ್ನುವ ಬಗ್ಗೆ ವರದಿ ತಯಾರಿಸುವಂತೆ ವೈದ್ಯಕೀಯ ಪರಿಣಿತರಿಗೆ ಸಚಿವರುಗಳು ಸೂಚನೆ ನೀಡಿದ್ದಾರೆ.

ಬೀದರ್: ಸಿಆರ್‌ಪಿಎಫ್‌ ಯೋಧ, ಮೂವರು ಕೆಎಸ್ಆರ್‌ಪಿ ಪೇದೆಗೆ ಸೋಂಕು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ