ಆ್ಯಪ್ನಗರ

ವಸತಿ ನಿಲಯ ಕಾರ್ಮಿಕರಿಂದ ಧರಣಿ

ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಟಿಯುಸಿಐ ನೇತೃತ್ವದಲ್ಲಿ ಸಹಾಯಕ ಆಯುಕ್ತರ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.

Vijaya Karnataka 20 Jun 2018, 5:00 am
ಲಿಂಗಸುಗೂರು : ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಟಿಯುಸಿಐ ನೇತೃತ್ವದಲ್ಲಿ ಸಹಾಯಕ ಆಯುಕ್ತರ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.
Vijaya Karnataka Web RAC-RCH18LNG P2


ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವಸತಿ ನಿಲಯದಲ್ಲಿ ಅಡುಗೆ ತಯಾರಿಸುವ ನೌಕರರಿಗೆ ಕಳೆದ 5-6 ತಿಂಗಳಿಂದ ವೇತನ ನೀಡದೇ ಸತಾಯಿಸುತ್ತಿದ್ದಾರೆ. ಈ ಕುರಿತು ಅಡುಗೆದಾರರು ಪ್ರಶ್ನಿಸಿದರೆ ಅನುದಾನ ಇಲ್ಲ. ಹಣ ಬಿಡುಗಡೆ ಬಳಿಕ ವೇತನ ಪಾವತಿ ಮಾಡುವುದಾಗಿ ಹೇಳುತ್ತಾರೆ ಎಂದು ಆರೋಪಿಸಿದ ಸಿಬ್ಬಂದಿ, ಕೂಡಲೇ ವಸತಿ ನಿಲಯಗಳ ಕಾರ್ಮಿಕರಿಗೆ 5 ತಿಂಗಳ ವೇತನ ನೀಡಬೇಕು. ಕಾರ್ಮಿಕ ಇಲಾಖೆ ಹೊರಡಿಸಿದ 2018-19 ಅಧಿಸೂಚಿತ ದರದಲ್ಲಿ ಮುಂದಿನ ವೇತನ ನೀಡಬೇಕು. ಕಾರ್ಮಿಕರ ಮೇಲೆ ದೌರ್ಜನ್ಯ ಮಾಡುವ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಕೈಗೊಳ್ಳಬೇಕು. ದಿನಕ್ಕೆ ಎಂಟು ಗಂಟೆ ಕೆಲಸದ ಅವಧಿಯನ್ನು ನಿಗದಿ ಮಾಡಬೇಕು. ಭಾನುವಾರ ಕಡ್ಡಾಯವಾಗಿ ರಜೆ ನೀಡಬೇಕು. ಕನಿಷ್ಠ ವೇತನ ಕಾಯಿದೆ-1948 ಸೆಕ್ಷ ನ್‌ 5-6 ಪ್ರಕಾರ ವೇತನ ನೀಡಬೇಕು ಎನ್ನುವುದು ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.

ಧರಣಿಯಲ್ಲಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಜಿ.ಅಮರೇಶ, ಎಂ.ಡಿ.ಕೈಸರ್‌ ರಜಾಕ್‌, ತಿಮ್ಮಣ್ಣ, ಗೌರಮ್ಮ, ಕಮಲಮ್ಮ, ದೇವಮ್ಮ, ಮೌಲಮ್ಮ, ದೇವಣ್ಣ, ಆದಪ್ಪ ಸೇರಿದಂತೆ ಇತರರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ