ಆ್ಯಪ್ನಗರ

ಎಸಿಬಿ ಬಲೆಗೆ ಹಿರಿಯ ಭೂ ವಿಜ್ಞಾನಿ

ಕಲ್ಲು ಗಣಿಗಾರಿಕೆ ನಡೆಸಲು 1ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಇಲ್ಲಿನ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಪುಷ್ಪಲತಾ ಅವರು ಗುರುವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.

Vijaya Karnataka 25 May 2018, 12:00 am
ರಾಯಚೂರು: ಕಲ್ಲು ಗಣಿಗಾರಿಕೆ ನಡೆಸಲು 1ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಇಲ್ಲಿನ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಪುಷ್ಪಲತಾ ಅವರು ಗುರುವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
Vijaya Karnataka Web acb trap senior scientist
ಎಸಿಬಿ ಬಲೆಗೆ ಹಿರಿಯ ಭೂ ವಿಜ್ಞಾನಿ


ಮಸ್ಕಿಯ ಶ್ರೀಧರ ಅವರು, ಕಲ್ಲು ಗಣಿಗಾರಿಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಮಂಜೂರಾತಿ ನೀಡಲು ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಅವರು, 1ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಇದರ ವಿರುದ್ಧ ಶ್ರೀಧರ್, ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಅಧಿಕಾರಿ ಪುಷ್ಪಲತಾ ಅವರು ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ಹೆಣೆದ ಬಲೆಗೆ ಸಿಲುಕಿದ್ದಾರೆ. ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ