ಆ್ಯಪ್ನಗರ

ರಾಯಚೂರು ವಿದ್ಯಾರ್ಥಿನಿ ಅಸಹಜ ಸಾವು: ಆರೋಪಿ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಸಿಐಡಿ ವಿಚಾರಣೆ ಪೂರ್ಣಗೊಂಡ ಕಾರಣ ಮೇ 2 ರಂದು ಆರೋಪಿಯನ್ನು ನ್ಯಾಯಾಂಗಕ್ಕೆ ಒಪ್ಪಿಸಿದ್ದರು ಸಿಐಡಿ ಅಧಿಕಾರಿಗಳು. ಅದಾದ ನಂತರ ಎರಡನೆ ಬಾರಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.

Vijaya Karnataka Web 27 May 2019, 3:08 pm
ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುದರ್ಶನ್ ಯಾದವ್‌ ನ್ಯಾಯಾಂಗ ಬಂಧನ ಅವಧಿಯನ್ನು ಜೂನ್‌ 7ರವರೆಗೆ ವಿಸ್ತರಿಸಲಾಗಿದೆ.
Vijaya Karnataka Web ಆರೋಪಿ
ಆರೋಪಿ


ಮೇ 27ಕ್ಕೆ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡ ಕಾರಣ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.

ಸಿಐಡಿ ವಿಚಾರಣೆ ಪೂರ್ಣಗೊಂಡ ಕಾರಣ ಮೇ 2 ರಂದು ಆರೋಪಿಯನ್ನು ನ್ಯಾಯಾಂಗಕ್ಕೆ ಒಪ್ಪಿಸಿದ್ದರು ಸಿಐಡಿ ಅಧಿಕಾರಿಗಳು. ಅದಾದ ನಂತರ ಎರಡನೆ ಬಾರಿ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.

ರಾಯಚೂರಿನ 3 ನೇ ಜೆಎಂಎಫ್‌ಸಿ ನ್ಯಾಯಾಧೀಶರಾದ ಅವಿನಾಶ ಗಾಳಿ ಅವರು ಆದೇಶ ನೀಡಿದರು.

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಕೆಲವ ತಿಂಗಳುಗಳ ಹಿಂದೆ ಶವವಾಗಿ ಪತ್ತೆಯಾಗಿದ್ದು ಇಡೀ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ವಿದ್ಯಾರ್ಥಿನಿ ಅಸಹಜ ಸಾವನ್ನು ಖಂಡಿಸಿ, ಬೆಂಗಳೂರು, ಹುಬ್ಬಳ್ಳಿ, ರಾಯಚೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ಪ್ರತಿಭಟನೆ ನಡೆದಿದ್ದವು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ