ಆ್ಯಪ್ನಗರ

ಬ್ರಿಗೇಡ್‌ ಮೂಲಕ ಬಿಜೆಪಿಗೆ ಅಧಿಕಾರ: ಈಶ್ವರಪ್ಪ

ಬ್ರಿಗೇಡ್ ನಲ್ಲಿ ಗುರುತಿಸಿಕೊಂಡವರನ್ನು ಒಬಿಸಿ ಮೋರ್ಚಾಕ್ಕೆ ಸೇರ್ಪಡೆಗೊಳಿಸುವ ಮೂಲಕ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲಾಗುವುದು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ವಿಕ ಸುದ್ದಿಲೋಕ 3 Jun 2017, 11:43 am
ರಾಯಚೂರು: ಬ್ರಿಗೇಡ್ ನಲ್ಲಿ ಗುರುತಿಸಿಕೊಂಡವರನ್ನು ಒಬಿಸಿ ಮೋರ್ಚಾಕ್ಕೆ ಸೇರ್ಪಡೆಗೊಳಿಸುವ ಮೂಲಕ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲಾಗುವುದು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
Vijaya Karnataka Web brigade will workout bjp to bring powereshwarappa
ಬ್ರಿಗೇಡ್‌ ಮೂಲಕ ಬಿಜೆಪಿಗೆ ಅಧಿಕಾರ: ಈಶ್ವರಪ್ಪ


ಬ್ರಿಗೇಡ್ ಸಂಘಟನೆ ಶಕ್ತಿಯುತವಾಗಿ ಬೆಳೆದಿದೆ. ಸಂಘಟನೆಯ ಕಾರ್ಯಕ್ರಮಕ್ಕೆ ಕಾರ್ಯಕರ್ತರು ಕರೆದಿದ್ದರಿಂದ ಈ ಹಿಂದೆ ಪಾಲ್ಗೊಂಡಿದ್ದೆ. ಆದರೆ ಸಂಘಟನೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಗೊಂದಲ ಉಂಟಾಗಿತ್ತು. ಹೀಗಾಗಿ ಅದರಿಂದ ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ಬ್ರಿಗೇಡ್ ನಿಂದ ದೂರವಾಗಬೇಕಾಯಿತು. ಬ್ರಿಗೇಡ್ ಕಾರ್ಯಕರ್ತರನ್ನು ಪಕ್ಷದ ಸಂಘಟನೆಗೆ ಬಳಸಿಕೊಳ್ಳುವಂತೆ ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಇದೆ. ಕೇಂದ್ರ ಸರಕಾರದಿಂದ ಬರ ನಿರ್ವಹಣೆಗೆ ಜನವರಿಯಲ್ಲಿ ಬಿಡುಗಡೆಯಾದ 700 ಕೋಟಿ ರೂಪಾಯಿ ರಾಜ್ಯ ಸರಕಾರದಿಂದ ಆಯಾ ಜಿಲ್ಲಾಧಿಕಾರಿ ಖಾತೆಗೆ ಜಮಾವಣೆಗೊಂಡಿಲ್ಲ.ಮಳೆಗಾಗಿ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಪರ್ಜನ್ಯ ಹೋಮ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ.ರೈತರ ಸಂಕಷ್ಟಕ್ಕೆ ರಾಜ್ಯ ಸರಕಾರ ತುರ್ತು ಆಗಿ ಸ್ಪಂದಿಸಿ ಸಾಲಮನ್ನಾ ಮಾಡಬೇಕು. ಸಭಾಪತಿ ಡಿ.ಎಚ್.ಶಂಕರ್‌ ಮೂರ್ತಿ ಅವರ ವಿರುದ್ಧ ಅವಿಶ್ವಾಸ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಕ್ಷದ ಆಂತರಿಕ ಗೊಂದಲದಿಂದಾಗಿ ನೋಟಿಸ್ ನೀಡಲಾಗಿದೆ. ಅವಿಶ್ವಾಸಕ್ಕೆ ಜೆಡಿಎಸ್ ಬೆಂಬಲಿಸುವುದಿಲ್ಲ ಎಂದು ಹೇಳಿದೆ.ಜಾತಿಗೊಂದು ಸ್ಥಾನಮಾನ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ಇದೆ ಮೊದಲು ಎಂದು ಟೀಕಿಸಿದರು. ಯಾವ ಸಮಯದಲ್ಲೂ ಚುನಾವಣೆ ಎದುರಾದರೂ ಎದುರಿಸಲು ಬಿಜೆಪಿ ಸಿದ್ಧವಾಗಿದೆ ಎಂದು ಈಶ್ವರಪ್ಪ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ