ಆ್ಯಪ್ನಗರ

ರಸ್ತೆಯಲ್ಲೇ ಹೆರಿಗೆ, ಮಹಿಳೆಯರು ನೆರವಿಗೆ

ಸ್ಕ್ಯಾನಿಂಗ್ ಸೆಂಟರ್‌ಗೆ ತೆರಳುತ್ತಿದ್ದ ವೇಳೆ ಗರ್ಭಿಣಿಗೆ ರಸ್ತೆಯಲ್ಲೇ ಹೆರಿಗೆಯಾದ ಘಟನೆ ಪಟ್ಟಣದ ಗಡಿಯಾರ ವೃತ್ತದ ಬಳಿ ಶನಿವಾರ ನಡೆದಿದೆ.

Vijaya Karnataka 30 Sep 2018, 12:00 am
Vijaya Karnataka Web childbirth on the road
ರಸ್ತೆಯಲ್ಲೇ ಹೆರಿಗೆ, ಮಹಿಳೆಯರು ನೆರವಿಗೆ

ಲಿಂಗಸುಗೂರು: ಸ್ಕ್ಯಾನಿಂಗ್ ಸೆಂಟರ್‌ಗೆ ತೆರಳುತ್ತಿದ್ದ ವೇಳೆ ಗರ್ಭಿಣಿಗೆ ರಸ್ತೆಯಲ್ಲೇ ಹೆರಿಗೆಯಾದ ಘಟನೆ ಪಟ್ಟಣದ ಗಡಿಯಾರ ವೃತ್ತದ ಬಳಿ ಶನಿವಾರ ನಡೆದಿದೆ.

ತಾಲೂಕಿನ ಕಾಳಾಪುರ ತಾಂಡಾ ನಿವಾಸಿ ಲಕ್ಷ್ಮಿಬಾಯಿ ಎನ್ನುವವರು ಗಡಿಯಾರ ವೃತ್ತದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಟೊದಲ್ಲಿ ತೆರಳುತ್ತಿದ್ದಾಗ ದಿಢೀರ್ ಹೆರಿಗೆ ನೋವು ಕಾಣಿಸಿದ್ದರಿಂದ ಸ್ಥಳದಲ್ಲಿನ ಮಹಿಳೆಯರು ನೆರವಿಗೆ ಧಾವಿಸಿದ್ದಾರೆ. ಅಲ್ಲಿಯೇ ಹೆರಿಗೆ ಮಾಡಿಸಿದ್ದಾರೆ. ನಂತರದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗರ್ಭಿಣಿಯನ್ನು ತಾಂಡಾದಿಂದ ಬೆಳಗ್ಗೆ ನಗುಮಗು ಆಂಬ್ಯುಲೆನ್ಸ್ ವಾಹನದಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಯಲ್ಲಿ ಅಲ್ಟ್ರಸೌಂಡ್ ಸೌಲಭ್ಯ ಇಲ್ಲದ್ದರಿಂದ ಖಾಸಗಿ ಸೆಂಟರ್‌ಗೆ ಕರೆದೊಯ್ಯಲು ಹೇಳಿದ್ದು, ಈ ವೇಳೆ ಘಟನೆ ನಡೆದಿದೆ. ತಾಯಿ, ಮಗು ಆರೋಗ್ಯವಾಗಿದ್ದಾರೆ ಎಂದು ಮುಖ್ಯವೈದ್ಯಾಧಿಕಾರಿ ಡಾ.ಲಕ್ಷ್ಮಪ್ಪ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ