ಆ್ಯಪ್ನಗರ

ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದಕ್ಕೆ ಬಿಎಸ್‌ವೈ ಕೆಜೆಪಿಯಲ್ಲಿ ಸೋಲು ಕಂಡಿದ್ದರು: ಈಶ್ವರಪ್ಪ

ಬಿ.ಎಸ್.ಯಡಿಯೂರಪ್ಪನವರು ಕೆಜೆಪಿಯಲ್ಲಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದರ ಪರಿಣಾಮವಾಗಿ ಸೋಲುಂಡು ಬಿಜೆಪಿಗೆ ಮರಳಿದರು ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.

Vijaya Karnataka Web 11 Nov 2018, 7:45 pm
ರಾಯಚೂರು: ವಿವಾದಿತ ಟಿಪ್ಪು ಜಯಂತಿ ಆಚರಣೆಯಲ್ಲಿ ಪಾಲ್ಗೊಂಡಿದ್ದರಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು. ಅದೇ ರೀತಿ, ಬಿ.ಎಸ್.ಯಡಿಯೂರಪ್ಪ ಕೂಡ ಕೆಜೆಪಿಯಲ್ಲಿದ್ದ ಸಂದರ್ಭದಲ್ಲಿ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದರ ಪರಿಣಾಮವಾಗಿ ಸೋಲುಂಡು ಬಿಜೆಪಿಗೆ ಮರಳಿದರು ಎಂದು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದರು.
Vijaya Karnataka Web bsy2


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಲ್ಲ. ಇದು ಕಾಂಗ್ರೆಸ್‌ನ ಅನಗತ್ಯ ಪ್ರಚಾರವಷ್ಟೇ ಎಂದು ಹೇಳಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 22 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುವು ದಾಖಲಿಸಲಿದೆ. ಪ್ರಧಾನಿ ಹುದ್ದೆಗೆ ಏರುವ ಕಾಂಗ್ರೆಸ್ ಕನಸು ನನಸಾಗದು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ರೈತರ ಸಾಲಮನ್ನಾ ಮಾಡದಿದ್ದಲ್ಲಿ ರಾಜ್ಯದ ಹಣಕಾಸು ಸ್ಥಿತಿಗತಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಲಿ ಎಂದು ಒತ್ತಾಯಿಸಿದರು.

ಮಹಾದಾಯಿ ನ್ಯಾಯಾಧಿಕರಣದ ತೀರ್ಪು ಪ್ರಕಟಗೊಂಡು ಮೂರು ತಿಂಗಳಾದರೂ ರಾಜ್ಯ ಸರಕಾರ ತೀರ್ಪಿ ಪ್ರಕಾರ ನೀರಿನ ಬಳಕೆಗೆ ಸಿದ್ಧತೆ ನಡೆಯುತ್ತಿಲ್ಲ ಎಂದು ದೂರಿರುವ ಈಶ್ವರಪ್ಪ, ಮಹಾದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ವಿರುದ್ಧ ಆರೋಪಿಸುತ್ತಿದ್ದ ಕಾಂಗ್ರೆಸ್ ನಾಯಕರು ಇದೀಗ ಮೌನವಾಗಿದ್ದಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯ ಎಂದಿದ್ದಾರೆ.

ನವೆಂಬರ್ 15ರಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಪಕ್ಷದಿಂದ ನಡೆಯಬೇಕಾದ ಹೋರಾಟದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ