ಆ್ಯಪ್ನಗರ

ರಾಯಚೂರು: ಕೋವಿಡ್ ಆಸ್ಪತ್ರೆಯಲ್ಲಿ ವೈರಸ್ ಸೋಂಕಿತ ಗರ್ಭಿಣಿಗೆ ಗರ್ಭಪಾತ!

ರಾಯಚೂರಿನ ಕೋವಿಡ್ ಆಸ್ಪತ್ರೆಯಲ್ಲಿನ ಸೋಂಕಿತೆ ಗರ್ಭಿಣಿಗೆ ಗರ್ಭಪಾತವಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆರೋಪ ಕೇಳಿಬಂದಿದ್ದು, ಕೋವಿಡ್ 19 ವಾರ್ಡ್ ರೋಗಿಗಳು ಪ್ರತಿಭಟನೆ ನಡೆಸಿದ್ದಾರೆ.

Vijaya Karnataka Web 9 Jun 2020, 12:38 pm
ರಾಯಚೂರು: ರಾಯಚೂರಿನ ಕೋವಿಡ್ 19 ಆಸ್ಪತ್ರೆಯಲ್ಲಿನ ಸೋಂಕಿತೆ ಗರ್ಭಿಣಿಗೆ ಗರ್ಭಪಾತವಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಕೃಷ್ಣ ಅವರು ಮಾಹಿತಿ ಬಹಿರಂಗಪಡಿಸಿದ್ದಾರೆ.
Vijaya Karnataka Web pregnent


ಓಪೆಕ್ ಆಸ್ಪತ್ರೆಯ ಕೋವಿಡ್ ವಿಭಾಗದ ಐಸೋಲೇಷನ್ ವಾರ್ಡ್ ನಲ್ಲಿ 3 ತಿಂಗಳ ಗರ್ಭಿಣಿಯೊಬ್ಬರು ದಾಖಲಾಗಿದ್ದರು. ಸೋಮವಾರ ತೀವ್ರ ರಕ್ತಸ್ರಾವವಾಗಿ ನರಳಾಡಿದ್ದ ಗರ್ಭಿಣಿಯನ್ನು ಕೋವಿಡ್ ವಾರ್ಡ್ ನಿಂದ ರಿಮ್ಸ್ ಗೆ ಕರೆತರಲಾಗಿತ್ತು.

ಭಾನುವಾರ ರಾತ್ರಿಯಿಂದಲೇ ರಕ್ತಸ್ರಾವವಾಗುತ್ತಿದ್ದರೂ ವೈದ್ಯರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಗರ್ಭಿಣಿಗೆ ಚಿಕಿತ್ಸೆ ನೀಡುವಂತೆ‌ ಕೊವಿಡ್ ವಾರ್ಡ್ ನ ರೋಗಿಗಳು ಮಧ್ಯಾಹ್ನದ ಊಟ ಬಿಟ್ಟು ಪ್ರತಿಭಟನೆ ನಡೆಸಿದರು. ರೋಗಿಗಳ ಆಕ್ರೋಶಕ್ಕೆ ಮಣಿದು ಗರ್ಭಿಣಿಯನ್ನು ನಂತರ ರಿಮ್ಸ್ ಗೆ ಸ್ಥಳಾಂತರಿಸಲಾಗಿತ್ತು.

ತೀವ್ರ ರಕ್ತಸ್ರಾವದಿಂದ ಗರ್ಭಪಾತವಾಗಿದ್ದು, ಸದ್ಯ ಸೋಂಕಿತ ಮಹಿಳೆ ಚೇತರಿಸಿ ಕೊಳ್ಳುತ್ತಿದ್ದಾರೆ. ಯಾವುದೇ ಅಪಾಯವಿಲ್ಲ ಎಂದು ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ