ಆ್ಯಪ್ನಗರ

ಯೋಜನೆ ಅನುಷ್ಠಾನಗೊಳಿಸುವಲ್ಲಿ ಜಿಲ್ಲಾಡಳಿತ ವೈಫಲ್ಯ

ಜಿಲ್ಲಾ ಮಟ್ಟದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಫಾಯಿ ಕರ್ಮಚಾರಿಗಳನ್ನು ಜೀತಪದ್ಧತಿಯಲ್ಲಿ ದುಡಿಸಿಕೊಳ್ಳಲಾಗುತ್ತಿದ್ದು, ಸರಕಾರ ಜಾರಿಗೊಳಿಸಿರುವ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಆರೋಪಿಸಿದರು.

Vijaya Karnataka 19 Jul 2018, 5:00 am
ರಾಯಚೂರು : ಜಿಲ್ಲಾ ಮಟ್ಟದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಫಾಯಿ ಕರ್ಮಚಾರಿಗಳನ್ನು ಜೀತಪದ್ಧತಿಯಲ್ಲಿ ದುಡಿಸಿಕೊಳ್ಳಲಾಗುತ್ತಿದ್ದು, ಸರಕಾರ ಜಾರಿಗೊಳಿಸಿರುವ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಆರೋಪಿಸಿದರು.
Vijaya Karnataka Web district administration failure to implement the scheme
ಯೋಜನೆ ಅನುಷ್ಠಾನಗೊಳಿಸುವಲ್ಲಿ ಜಿಲ್ಲಾಡಳಿತ ವೈಫಲ್ಯ


ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಫಾಯಿ ಕರ್ಮಚಾರಿಗಳ ಸಂಘ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸದಸ್ಯರ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ''ನಗರದಲ್ಲಿ ಬೆಳಗ್ಗೆ ಖುದ್ದು ಸಂಚರಿಸಿ ಸಫಾಯಿ ಕರ್ಮಚಾರಿಗಳ ಕೆಲಸ ಹಾಗೂ ನಗರದಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಕಡೆ ನಡೆದಿಲ್ಲ. ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸಬೇಕೆಂಬುದು ಕೇಂದ್ರ ಸರಕಾರದ ಆದೇಶವಾಗಿದೆ. ನಗರದಲ್ಲಿ ಪೂರ್ಣ ಪ್ರಮಾಣದ ಒಳಚರಂಡಿ ವ್ಯವಸ್ಥೆ ಅಳವಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ'' ಎಂದರು.

ಎಚ್ಚರಿಕೆ: ''ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಗುತ್ತಿಗೆದಾರರು ಸರಿಯಾಗಿ ಕಾರ್ಯನಿರ್ವಹಿಸದ ಪರಿಣಾಮ ಹಲವು ಸಮಸ್ಯೆಗಳು ಉದ್ಭವವಾಗಿವೆ. ಸಫಾಯಿ ಕರ್ಮಚಾರಿಗಳಿಗೆ ವೇತನವನ್ನು ನೇರವಾಗಿ ಪಾವತಿಸಲು ಸರಕಾರದ ಆದೇಶವಿದ್ದರೂ ಇನ್ನೂ ಜಾರಿಯಾಗಿಲ್ಲ. 15ದಿನಗಳಲ್ಲಿ ವೇತನವನ್ನು ನೇರವಾಗಿ ಪಾವತಿಸದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು'' ಎಂದು ಎಚ್ಚರಿಸಿದ ಅವರು, ಸಫಾಯಿ ಕರ್ಮಚಾರಿಗಳ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವಿವರವನ್ನು ಸಲ್ಲಿಸಿದರೆ, ಮೊದಲ ಹಂತದಲ್ಲಿ 40 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ. ಮೂರು ತಿಂಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿರಹಿತ 25ಲಕ್ಷ ರೂ.ವರೆಗೆ ಸಾಲ ನೀಡಲಾಗುತ್ತದೆ'' ಎಂದು ತಿಳಿಸಿದರು.

ರಾಜ್ಯಗಳಿಗೆ ನಿರ್ದೇಶನ: ''2020ರ ವೇಳೆಗೆ ಸಫಾಯಿ ಕರ್ಮಚಾರಿಗಳಿಗೆ ಕನಿಷ್ಠ ವೇತನ ಜಾರಿಗೊಳಿಸಿ, ಅವರಿಗೆ ಆರೋಗ್ಯ ಸೌಲಭ್ಯ ಕಲ್ಪಿಸಬೇಕು. ಅವರ ಮಕ್ಕಳಿಗೆ ಗುಣಮಟ್ಟದ ಶಿಕ್ಷ ಣ ಕೊಡಿಸುವ ಜತೆಗೆ ಪ್ರತಿಯೊಬ್ಬರೂ ಸ್ವಂತ ಸೂರು ಹೊಂದಲು ಯಾವುದೇ ವಸತಿ ಯೋಜನೆಗಳಲ್ಲಿ ಕ್ರಮಕೈಗೊಳ್ಳಬೇಕು ಎಂದು ಎಲ್ಲ ರಾಜ್ಯ ಸರಕಾರಗಳಿಗೆ ಈಗಾಗಲೇ ನಿರ್ದೇಶಿಸಲಾಗಿದೆ'' ಎಂದು ಜಗದೀಶ ಹಿರೇಮನಿ ವಿವರಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಅಧ್ಯಕ್ಷೆ ಆದಿಮನೆ ವೀರಲಕ್ಷ್ಮಿ, ಗುಲ್ಬರ್ಗ ವಿವಿ ಸಿಂಡಿಕೇಟ್‌ ಸದಸ್ಯ ವಿಜಯಭಾಸ್ಕರ್‌ ಇಟಗಿ ಇದ್ದರು.

...........
ರಾಜ್ಯದಲ್ಲಿ 708 ಸಫಾಯಿ ಕರ್ಮಚಾರಿಗಳು

''ರಾಜ್ಯದಲ್ಲಿ 708 ಸಫಾಯಿ ಕರ್ಮಚಾರಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಇನ್ನೂ ಹೆಚ್ಚಿನ ಸಫಾಯಿ ಕರ್ಮಚಾರಿಗಳನ್ನು ಗುರುತಿಸುವ ಕಾರ್ಯವನ್ನು ರಾಜ್ಯ ಸರಕಾರ ನಡೆಸುತ್ತಿದ್ದು, ಒಂದು ತಿಂಗಳಲ್ಲಿ ಸಂಪೂರ್ಣ ಮಾಹಿತಿ ನೀಡಲಿದೆ '' ಎಂದು ಜಗದೀಶ ಹಿರೇಮನಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ