ಆ್ಯಪ್ನಗರ

'ಶೀಘ್ರ ಚಾಲಕ ಕಂ ನಿರ್ವಾಹಕ ಹುದ್ದೆ ಭರ್ತಿ'

ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಎರಡು ಸಾವಿರ ಚಾಲಕ ಕಂ ನಿರ್ವಾಹಕ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಾಹೀರಾ ನಸೀಮ್‌ ಹೇಳಿದರು.

Vijaya Karnataka 28 Aug 2019, 5:00 am
ಲಿಂಗಸುಗೂರು ; ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಎರಡು ಸಾವಿರ ಚಾಲಕ ಕಂ ನಿರ್ವಾಹಕ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಾಹೀರಾ ನಸೀಮ್‌ ಹೇಳಿದರು.
Vijaya Karnataka Web driver post
'ಶೀಘ್ರ ಚಾಲಕ ಕಂ ನಿರ್ವಾಹಕ ಹುದ್ದೆ ಭರ್ತಿ'


ಪಟ್ಟಣದ ಹೊಸ ಬಸ್‌ ನಿಲ್ದಾಣದ ಕಾಮಗಾರಿ ಹಾಗೂ ಸಾರಿಗೆ ಘಟಕವನ್ನು ಮಂಗಳವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಥೆಯ ವ್ಯಾಪ್ತಿಯಲ್ಲಿಎಲ್ಲಘಟಕಗಳಿಗೆ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು. ಸಾರ್ವಜನಿಕರಿಗೆ ಒಳ್ಳೆಯ ರೀತಿ ಸೇವೆ ನೀಡುವ ಹಿನ್ನೆಲೆಯಲ್ಲಿಬಸ್‌ಗಳ ಸಂಖ್ಯೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. 150 ಹೊಸ ಬಸ್‌ಗಳನ್ನು ಖರೀದಿಸಲಾಗುವುದು. ಹಲವೆಡೆ ಹೊಸ ನಿಲ್ದಾಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ವಿದ್ಯಾರ್ಥಿಗಳು ಮತ್ತು ಹಳ್ಳಿ ಜನರಿಗೆ ಗುಣಮಟ್ಟದ ಸೇವೆ ನೀಡಲು ಅಗತ್ಯ ಸವಲತ್ತು ಒದಗಿಸಲಾಗುತ್ತಿದೆ. ಸಂಸ್ಥೆ ವ್ಯಾಪ್ತಿಯ ಘಟಕಗಳ ನಡುವೆ ಬಸ್‌ ದರ ತಾರತಮ್ಯವಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದ್ದು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

ಸ್ವಚ್ಛತೆ ಸೂಚನೆ: ಪಟ್ಟಣದ ಸಾರಿಗೆ ಘಟಕಕ್ಕೆ ಭೇಟಿ ನೀಡಿದ್ದ ಅವರು, ಘಟಕದಲ್ಲಿಸ್ವಚ್ಛತೆ ಕಾಪಾಡಬೇಕು. ಸಿಬ್ಬಂದಿಗೆ ಕುಡಿವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶುದ್ಧ ನೀರಿನಿಂದ ಬಸ್‌ ತೊಳೆಯಬೇಕು. ಸಿಬ್ಬಂದಿಗಳಿಗೆ ಗ್ಲೌಜ್‌, ಮಾಸ್ಕ್‌ ನೀಡಬೇಕು ಹಾಗೂ ಸ್ವಚ್ಛತೆಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಿ ಎಂದು ಘಟಕದ ವ್ಯವಸ್ಥಾಪಕ ಪ್ರಕಾಶ ದೊಡ್ಡಮನಿಗೆ ಸೂಚಿಸಿದರು.

ಕಲಬುರ್ಗಿ ವಿಭಾಗದ ಸಿಟಿಎಂ ಕೋಟ್ರೇಶ್‌, ಡಿಟಿಒ ಜಾದವ್‌, ರಾಯಚೂರು ಜಾಗೃತಿ ದಳ ಅಧಿಕಾರಿ ನಜೀರ್‌ ಅಹ್ಮದ್‌ ಹಾಗೂ ಗುತ್ತೆದಾರ ಆದಪ್ಪ ಮನಗೂಳಿ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ