ಆ್ಯಪ್ನಗರ

‘ಜನಸಂಖ್ಯೆ ಆಧರಿಸಿ ಮೀಸಲು ಜಾರಿಗೊಳಿಸಿ’

ರಾಜ್ಯದಲ್ಲಿಪರಿಶಿಷ್ಟ ಪಂಗಡ ಜನಸಂಖ್ಯೆ ಅನುಗುಣವಾಗಿ ಮೀಸಲು ಜಾರಿಗೊಳಿಸಬೇಕು ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್‌ ಹೇಳಿದರು.

Vijaya Karnataka Web 31 Oct 2019, 3:16 pm
ಮಸ್ಕಿ : ರಾಜ್ಯದಲ್ಲಿಪರಿಶಿಷ್ಟ ಪಂಗಡ ಜನಸಂಖ್ಯೆ ಅನುಗುಣವಾಗಿ ಮೀಸಲು ಜಾರಿಗೊಳಿಸಬೇಕು ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್‌ ಹೇಳಿದರು.
Vijaya Karnataka Web enforce reserves based on population
‘ಜನಸಂಖ್ಯೆ ಆಧರಿಸಿ ಮೀಸಲು ಜಾರಿಗೊಳಿಸಿ’


ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿಬುಧವಾರ ಹಮ್ಮಿಕೊಂಡಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿಗಳ ನೇತೃತ್ವದಲ್ಲಿಪಾದಯಾತ್ರೆ ಮಾಡಿ ಗಮನ ಸೆಳೆಯಲಾಗಿದೆ. ಮುಖ್ಯಮಂತ್ರಿಗಳಿಗೆ ಮೀಸಲು ಹೆಚ್ಚಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ. ಈವರೆಗೂ ಸರಕಾರ ಈ ಬಗ್ಗೆ ಗಮನಹರಿಸಿಲ್ಲ. ಮುಂದಿನ ದಿನಗಳಲ್ಲಿರಾಜ್ಯ ಸರಕಾರ ಮೀಸಲು ಹೆಚ್ಚಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿನಿರ್ಧಾರ ಕೈಗೊಳ್ಳಬೇಕು ಎಂದರು. ಮುಖಂಡರಾದ ಸಿದ್ರಾಮಪ್ಪ ಸಾಹುಕಾರ, ಬಸವಂತರಾಯ ಕುರಿ ಸೇರಿದಂತೆ ಇನ್ನಿತರರು ಮಾತನಾಡಿದರು. ಈ ಸಂದರ್ಭದಲ್ಲಿಸಿದ್ದನಗೌಡ ತುರ್ವಿಹಾಳ, ಶೇಖರಗೌಡ ಕಾಟಗಲ್‌, ಅಪ್ಪಾಜಿಗೌಡ ಸೇರಿದಂತೆ ಹಲವರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ