ಆ್ಯಪ್ನಗರ

ಚುನಾವಣಾಧಿಕಾರಿಯಿಂದ ಪರಿಶೀಲನೆ

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿ ಮಂಗಳವಾರ ಬೆಳಗ್ಗೆ ಚುನಾವಣಾ ಅಧಿಕಾರಿ ಡಾ.ಚೇತನಾ ಪಾಟೀಲ ಪರಿಶೀಲನೆ ನಡೆಸಿದರು.

Vijaya Karnataka Web 4 Apr 2018, 5:00 am
ಮಸ್ಕಿ : ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿ ಮಂಗಳವಾರ ಬೆಳಗ್ಗೆ ಚುನಾವಣಾ ಅಧಿಕಾರಿ ಡಾ.ಚೇತನಾ ಪಾಟೀಲ ಪರಿಶೀಲನೆ ನಡೆಸಿದರು.
Vijaya Karnataka Web examination by election commissioner
ಚುನಾವಣಾಧಿಕಾರಿಯಿಂದ ಪರಿಶೀಲನೆ


ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಲಿಂಗಸುಗೂರು ಹಾಗೂ ಮಸ್ಕಿ ತಾಲೂಕಿನ ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ, ಭದ್ರತೆ ಕಲ್ಪಿಸಲಾಗಿದೆ. ಸಂಶಯಾಸ್ಪದವಾಗಿ ತಿರುಗಾಡುವ ಯಾವುದೇ ವಾಹನಗಳನ್ನು ತಪಾಸಣೆ ಒಳಪಡಿಸಲಾಗುತ್ತಿದೆ. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಾರು, ಲಾರಿ ಸೇರಿದಂತೆ ಸಾರಿಗೆ ಸಂಸ್ಥೆಯ ವಾಹನಗಳನ್ನು ತಪಾಸಣೆಗೊಳಪಡಿಸಲಾಯಿತು. ಹೆಚ್ಚುವರಿ ತಹಸೀಲ್ದಾರ್‌ ತಿಮ್ಮಣ್ಣ, ಸೇರಿದಂತೆ ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ