ಆ್ಯಪ್ನಗರ

ರೈತರ ಸಾಲಮನ್ನಾ: ದ್ವಂದ್ವ ನೀತಿ ಕೈ ಬಿಡಲು ಆಗ್ರಹ

ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ರೈತರ ಸಾಲ ಮನ್ನಾ ವಿಚಾರದಲ್ಲಿ ದ್ವಂದ್ವ ನೀತಿ ಬಿಟ್ಟು ರೈತರ ಎಲ್ಲ ಸಾಲ ಮನ್ನಾ ಮಾಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಬಣ) ಜಿಲ್ಲಾಧ್ಯಕ್ಷ ವಾಸುದೇವ ಮೇಟಿ ಒತ್ತಾಯಿಸಿದರು.

Vijaya Karnataka 23 Jun 2018, 5:00 am
ರಾಯಚೂರು : ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ರೈತರ ಸಾಲ ಮನ್ನಾ ವಿಚಾರದಲ್ಲಿ ದ್ವಂದ್ವ ನೀತಿ ಬಿಟ್ಟು ರೈತರ ಎಲ್ಲ ಸಾಲ ಮನ್ನಾ ಮಾಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಬಣ) ಜಿಲ್ಲಾಧ್ಯಕ್ಷ ವಾಸುದೇವ ಮೇಟಿ ಒತ್ತಾಯಿಸಿದರು.
Vijaya Karnataka Web farmers debt demands to leave dual policy
ರೈತರ ಸಾಲಮನ್ನಾ: ದ್ವಂದ್ವ ನೀತಿ ಕೈ ಬಿಡಲು ಆಗ್ರಹ


ನಗರದ ಪತ್ರಿಕಾಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಕುಮಾರಸ್ವಾಮಿಯವರು ಇಂದು ಬೆಳೆ ಸಾಲ ಮಾತ್ರ ಮನ್ನಾ ಮಾಡಲಾಗುವುದು ಎನ್ನುವ ಮೂಲಕ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ಹೈನುಗಾರಿಕೆ ಮತ್ತು ಪಶು ಸಂಗೋಪನೆ ಕೈ ಬಿಟ್ಟು ಕೇವಲ ಬೆಳೆ ಸಾಲ ಮನ್ನಾ ಮಾಡುವುದಾಗಿ ಹೇಳಿಕೆ ನೀಡುತ್ತಿರುವುದು ಖಂಡನೀಯ. ರಾಜ್ಯ ಸರಕಾರ 2009 ರಿಂದ 17ರವರೆಗಿನ ಬೆಳೆ ಸಾಲಮನ್ನಾ ಮಾಡುವುದಾಗಿ ಹೇಳುತ್ತಿದ್ದು, 2009ರಿಂದ ಇಲ್ಲಿಯವರೆಗೆ ಕೃಷಿ ಚಟುವಟಿಕೆಗೆ ತೆಗೆದುಕೊಂಡ ಎಲ್ಲ ಸಾಲವನ್ನು ಯಾವುದೇ ಷರತ್ತುಗಳಿಲ್ಲದೇ ಮನ್ನಾ ಮಾಡಬೇಕು. ಜಿಲ್ಲೆಯಲ್ಲಿ ಫಸಲ್‌ ಬಿಮಾ ಯೋಜನೆಯ ಫಲಾನುಭವಿ ರೈತರಿಗೆ ಬಾಕಿ ಹಣ ಪಾವತಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲೆಗೆ 24ಗಂಟೆ ನಿರಂತರ ವಿದ್ಯುತ್‌ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ತಿಳಿಸಿದರು.

ಸಿದ್ದಲಿಂಗೇಶ್ವರ ಪಾಟೀಲ್‌, ಬವರಾಜ, ಶರಣಪ್ಪ, ರಂಗಣ್ಣ ನಾಯಕ, ಮಲ್ಲಿಕಾರ್ಜುನ ರೆಡ್ಡಿ, ಬಸವರಾಜ ರೆಡಿ, ಬಿ.ಆರ್‌.ಪಾಟೀಲ್‌, ವಿರೇಶ ಸೇರಿ ಇತರರು ಉಪಸ್ಥಿತ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ