ಆ್ಯಪ್ನಗರ

ತೊಗರಿ ಹಣ ಪಾವತಿಗೆ ರೈತರ ಆಗ್ರಹ

ಖರೀದಿ ಕೇಂದ್ರದಲ್ಲಿ ಮಾರಾಟವಾದ ತೊಗರಿ ಹಣ ಪಾವತಿಯಲ್ಲಿ ಅಧಿಕಾರಿಗಳು ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Vijaya Karnataka 29 May 2019, 5:00 am
ರಾಯಚೂರು ; ಖರೀದಿ ಕೇಂದ್ರದಲ್ಲಿ ಮಾರಾಟವಾದ ತೊಗರಿ ಹಣ ಪಾವತಿಯಲ್ಲಿ ಅಧಿಕಾರಿಗಳು ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Vijaya Karnataka Web RAC-RCH28HD04


ನಂತರ ಜಿಲ್ಲಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿದರು. ಜನವರಿಯಲ್ಲಿ ಖರೀದಿ ಕೇಂದ್ರಗಳಿಗೆ ತೊಗರಿ ಮಾರಾಟ ಮಾಡಲಾಗಿದೆ. ಇದುವರೆಗೂ ತೊಗರಿ ಹಣ ಪಾವತಿಯಾಗಿಲ್ಲ. ತೊಗರಿ ಹಣ ಪಾವತಿಸುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದು, ರೈತರ ಖಾತೆಗಳಿಗೆ ಇದುವರೆಗೂ ಹಣ ಜಮೆಯಾಗಿಲ್ಲ. ತೊಗರಿ ಮಾರಾಟ ಮಾಡಿ ನಾಲ್ಕು ತಿಂಗಳು ಗತಿಸಿದರೂ ಹಣ ಜಮಾ ಮಾಡದ್ದರಿಂದ ಸಂಕಷ್ಟ ಎದುರಿಸುವಂತಾಗಿದೆ. 24 ಗಂಟೆಯಲ್ಲಿ ನೇರವಾಗಿ ರೈತರ ಖಾತೆಗೆ ತೊಗರಿ ಹಣ ಜಮಾ ಮಾಡಲಾಗುವುದು ಎಂದು ಹೇಳಿದ್ದ ಸರಕಾರ ಇತ್ತ ಗಮನ ಹರಿಸಿಲ್ಲ. ಇದೀಗ ಮುಂಗಾರು ಆರಂಭವಾಗುತ್ತಿದ್ದು, ರೈತರು ಬಿತ್ತನೆ ಸಿದ್ಧತೆ ನಡೆಸಿದ್ದಾರೆ. ಕ್ರಿಮಿನಾಶಕ, ಗೊಬ್ಬರ, ಖರ್ಚು ಜಾಸ್ತಿಯಾಗಿ, ಆರ್ಥಿಕ ಹೊರೆಯಾಗುತ್ತಿದೆ. ಜಿಲ್ಲಾಧಿಕಾರಿಗಳು ಎಚ್ಚೆತ್ತುಕೊಂಡು ಕೂಡಲೇ ರೈತರ ಖಾತೆಗೆ ತೊಗರಿ ಹಣ ಜಮಾ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಲಕ್ಷ ್ಮಣಗೌಡ ಕಡಗಂದೊಡ್ಡಿ, ದೇವರಾಜ ನಾಯಕ, ನರಸರೆಡ್ಡಿ, ಹುಲಿಗೆಪ್ಪ, ಕೆ.ವೀರೇಶ್‌, ತಿಮ್ಮಪ್ಪ ಸೇರಿದಂತೆ ಅನೇಕರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ