ಆ್ಯಪ್ನಗರ

ಹೈ.ಕ.ವಿಮೋಚನಾ ದಿನಾಚರಣೆ: ಪೂರ್ವಭಾವಿ ಸಭೆ

ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನವನ್ನು ನಗರ ಮತ್ತು ಜಿಲ್ಲಾದ್ಯಂತ ಸೆ.17 ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರ ಅಧ್ಯಕ್ಷ ತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ತೀರ್ಮಾನಿಸಲಾಯಿತು.

Vijaya Karnataka 12 Sep 2017, 5:00 am

ರಾಯಚೂರು: ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನವನ್ನು ನಗರ ಮತ್ತು ಜಿಲ್ಲಾದ್ಯಂತ ಸೆ.17 ರಂದು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಅವರ ಅಧ್ಯಕ್ಷ ತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷ ತೆ ವಹಿಸಿ ಜಿಲ್ಲಾಧಿಕಾರಿಗಳು ಮಾತನಾಡಿದರು. ಹೈದರಾಬಾದ್‌ ಕರ್ನಾಟಕ ವಿಮೋಚನಾ ದಿನಾಚರಣೆಯ ನಿಮಿತ್ತ ಅಂದು ಬೆಳಗ್ಗೆ 8.30 ಗಂಟೆಗೆ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಹಾಗೂ ಗಾಂದೀಜಿಯವರ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ ಸೇಠ್‌ ಅವರು ಮಾಲಾರ್ಪಣೆ ಮಾಡುವರು. ನಂತರ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆ(ಡಿ.ಎ.ಆರ್‌.) ಮೈದಾನದಲ್ಲಿ ಬೆಳಗಿನ ಜಾವ 9 ಗಂಟೆಗೆ ಹೈದರಾಬಾದ್‌ ಕರ್ನಾಟಕ ವಿಮೋಚನೆ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಆಕರ್ಷಕ ಸಾಮೂಹಿಕ ಪಥಸಂಚಲನ ಆಯೋಜಿಸಲು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಜರುಗುವ ವಿಮೋಚನಾ ದಿನಾಚರಣೆಯ ಧ್ವಜಾರೋಹಣ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಯಿತು. ಹಾಜರಾಗದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹಾಗೂ ನಾನಾ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ