ಆ್ಯಪ್ನಗರ

'ಸದಾಶಿವ ಆಯೋಗ ವರದಿ ಜಾರಿಗೆ ಸಿಎಂ ಭಟ್ಟಂಗಿಗಳ ವಿರೋಧ'

ಸಿಎಂ ಸಿದ್ದರಾಮಯ್ಯ ಭಟ್ಟಂಗಿಗಳಿಂದ ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ವಿರೋಧವಿರುವುದಾಗಿ ವರದಿ ಜಾರಿ ಹೋರಾಟ ಸಮಿತಿ ಉಪಾಧ್ಯಕ್ಷ ಎನ್.ಮೂರ್ತಿ ಹೇಳಿದ್ದಾರೆ.

Vijaya Karnataka Web 8 Feb 2018, 12:26 pm
ರಾಯಚೂರು: ಸಿಎಂ ಸಿದ್ದರಾಮಯ್ಯ ಭಟ್ಟಂಗಿಗಳಿಂದ ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ವಿರೋಧವಿರುವುದಾಗಿ ವರದಿ ಜಾರಿ ಹೋರಾಟ ಸಮಿತಿ ಉಪಾಧ್ಯಕ್ಷ ಎನ್.ಮೂರ್ತಿ ಹೇಳಿದ್ದಾರೆ.
Vijaya Karnataka Web justice sadashiva commission report
'ಸದಾಶಿವ ಆಯೋಗ ವರದಿ ಜಾರಿಗೆ ಸಿಎಂ ಭಟ್ಟಂಗಿಗಳ ವಿರೋಧ'


ಸಮಾಜದಲ್ಲಿರುವ ಕೆಲವರಿಂದ ಕಾಲೆಳೆಯುವ ಕೆಲಸ ನಡೆಯುತ್ತಿದೆ. ದಲಿತ ಸಮಾಜವನ್ನು ಒಡೆದು ಮತ ಬ್ಯಾಂಕ್ ರಾಜಕಾರಣ ಮಾಡಲಾಗುತ್ತಿದೆ. ಬಿಜೆಪಿ ಕೋಮುವಾದಿಯಾದರೆ, ಕಾಂಗ್ರೆಸ್ ಮೃದು ಕೋಮುವಾದಿ ಪಕ್ಷ. ರಾಹುಲ್ ಗಾಂಧಿಯ ಗಮನ ಸೆಳೆಯಲು ಅವರು ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡುವುದಾಗಿ ಮೂರ್ತಿ ತಿಳಿಸಿದ್ದಾರೆ.

ಆಯೋಗದ ವರದಿ ಜಾರಿಗೆ ಆಗ್ರಹಿಸಿ ಫೆ. ಹನ್ನೊಂದರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವರದಿ ಜಾರಿ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರಸಂದ್ರ ಮುನಿಯಪ್ಪ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸದಾಶಿವ ಆಯೋಗದ ವರದಿ ಜಾರಿ ಭರವಸೆ ನೀಡಿ ಮಾತು ತಪ್ಪಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ