ಆ್ಯಪ್ನಗರ

ಶಬರಿಮಲೆ ಸಂಪ್ರದಾಯ ಗೌರವಿಸಿ: ಮಂತ್ರಾಲಯ ಶ್ರೀಗಳು

ಕರ್ನಾಟಕದಲ್ಲಿ ಬರ ಹಿನ್ನೆಲೆ ರೈತರ ಸಂಕಷ್ಟಗಳಿಗೆ ಸರಕಾರ ತುರ್ತು ಸ್ಪಂದಿಸಬೇಕು. ರೈತರ ಸಾಲ ಮನ್ನಾಕ್ಕೆ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ.

Vijaya Karnataka Web 20 Nov 2018, 12:52 pm
ರಾಯಚೂರು: ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನ ಆದೇಶ ಗೌರವಿಸುವ ಜತೆಗೆ ಸಂಪ್ರದಾಯಕ್ಕೂ ಬೆಲೆ ಕೊಡಬೇಕಿದೆ ಎಂದು ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಶೀಘ್ರ ನಿರ್ಧಾರ ಕೈಗೊಂಡು ಶಾಂತಿಯುತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆಯಿದೆ ಎಂದೂ ಅವರು ಹೇಳಿದರು.
Vijaya Karnataka Web subudhendra theertharu


ಇನ್ನು, ತುಂಗಭದ್ರಾ ನದಿಗೆ ಮಂತ್ರಾಲಯದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಆಂಧ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಬ್ಯಾರೇಜ್ ನಿರ್ಮಾಣದಿಂದ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಮತ್ತು ನದಿಯ ಎರಡೂ ಕಡೆಯ ಗ್ರಾಮಸ್ಥರ ಸಂಚಾರಕ್ಕೆ ಅನುಕೂಲವಾಗಲಿದೆ.

ಅಲ್ಲದೆ, ಕರ್ನಾಟಕದಲ್ಲಿ ಬರ ಹಿನ್ನೆಲೆ ರೈತರ ಸಂಕಷ್ಟಗಳಿಗೆ ಸರಕಾರ ತುರ್ತು ಸ್ಪಂದಿಸಬೇಕು. ರೈತರ ಸಾಲ ಮನ್ನಾಕ್ಕೆ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಶೀಘ್ರ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರೈತರ ಸಮಸ್ಯೆಗಳಿಗೆ ಸಂಬಂಧಿಸಿ ಚರ್ಚಿಸಲು ನಿರ್ಧಾರ ಮಾಡಿದ್ದೇನೆ ಎಂದು ಸಹ ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ