ಆ್ಯಪ್ನಗರ

ಬಡ್ತಿ ಮೀಸಲಾತಿ ತೀರ್ಪು: ಸಂಭ್ರಮಾಚರಣೆ

ಎಸ್‌ಸಿ, ಎಸ್‌ಟಿ ನೌಕರರ ಸಮಸ್ಯೆಗಳಿಗೆ ಸಂಘಟನಾತ್ಮಕ ಹೋರಾಟದಿಂದ ಪರಿಹಾರ ಸಾಧ್ಯ ಎಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿಯ ರಾಜ್ಯ ಅಧ್ಯಕ್ಷ ಶಿವಶಂಕರ ಹೇಳಿದರು.

Vijaya Karnataka 21 May 2019, 5:00 am
ರಾಯಚೂರು: ಎಸ್‌ಸಿ, ಎಸ್‌ಟಿ ನೌಕರರ ಸಮಸ್ಯೆಗಳಿಗೆ ಸಂಘಟನಾತ್ಮಕ ಹೋರಾಟದಿಂದ ಪರಿಹಾರ ಸಾಧ್ಯ ಎಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿಯ ರಾಜ್ಯ ಅಧ್ಯಕ್ಷ ಶಿವಶಂಕರ ಹೇಳಿದರು.
Vijaya Karnataka Web RAC-RCH19HD03


ಬಡ್ತಿ ಮೀಸಲಾತಿ ಕುರಿತು ಸುಪ್ರೀಂಕೋರ್ಟ್ ಪ್ರಕಟಿಸಿದ ಆದೇಶ ಸ್ವಾಗತಿಸಿ ಅವರು ಇತ್ತೀಚೆಗೆ ಮಾತನಾಡಿದರು.

ರಾಜ್ಯ ಸರಕಾರ ರೂಪಿಸಿದ ಪರಿಶಿಷ್ಟ ವರ್ಗ, ಪರಿಶಿಷ್ಟ ಪಂಗಡ ಬಡ್ತಿ ಮೀಸಲಾತಿ ಹೊಸ ಕಾಯಿದೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದು ತೀರ್ಪು ನೀಡಿರುವುದು ಸ್ವಾಗತಾರ್ಹ. ಎಸ್‌ಸಿ, ಎಸ್‌ಟಿಗಳಿಗೆ ಸಂವಿಧಾನಬದ್ಧವಾಗಿ ದೊರೆಯಬೇಕಾದ ಹಕ್ಕುಗಳನ್ನು ದೊರೆಯದಂತೆ ಅನೇಕ ಮೇಲ್ವರ್ಗ ಜಾತಿ ಮನುಸ್ಸುಗಳು ನಿರಂತರವಾಗಿ ಮಾಡುತ್ತಾ ಬಂದಿವೆ. ಜಾತಿಯ ಮನಸ್ಥಿತಿಯಿಂದ ಹೊರಬಾರದೇ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡಲು ಹವಣಿಸುತ್ತಿದ್ದಾರೆ ಎಂದರು.

ಇದಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಅಂಬೇಡ್ಕರ್ ವತ್ತದಲ್ಲಿ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿ ಘೋಷಣೆ ಕೂಗಿದರು. ಪರಸ್ಪರ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು.

ಪದಾಧಿಕಾರಿಗಳಾದ ಶಿವಕುಮಾರ, ಗೋಪಾಲ ಕಷ್ಣ, ಮೋಹನ್, ತಾಯರಾಜ ಮರ್ಚೆಟಾಳ್, ಎಸ್‌ಟಿ ನೌಕರರ ಸಂಘದ ಅಧ್ಯಕ್ಷ ಯಲ್ಲಪ್ಪ ಜಾಲಿಬೆಂಚಿ, ರಾಜೇಂದ್ರ ಜಲ್ದಾರ್, ಬಾಬು, ರಾಜು, ಲಕ್ಷ್ಮೀಕುಮಾರ, ವೆಂಕಟೇಶ ಬೇವಿನಬೆಂಚಿ ಸೇರಿ ಅನೇಕರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ