ಆ್ಯಪ್ನಗರ

‘ರಾಯಚೂರು ಬರಪೀಡಿತ ತಾಲೂಕೆಂದು ಘೋಷಿಸಿ’

ಮುಂಗಾರು ಮಳೆ ಸಂಪೂರ್ಣ ವಿಫಲವಾಗಿದ್ದರಿಂದ ರೈತರ ಪರಿಸ್ಥಿತಿ ಚಿಂತಾಜನಕವಾಗಿದ್ದು, ರಾಯಚೂರು ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ಅವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕರಿಗೆ ಗುರುವಾರ ಮನವಿ ಸಲ್ಲಿಸಿದರು.

Vijaya Karnataka 27 Jul 2018, 5:00 am
ರಾಯಚೂರು : ಮುಂಗಾರು ಮಳೆ ಸಂಪೂರ್ಣ ವಿಫಲವಾಗಿದ್ದರಿಂದ ರೈತರ ಪರಿಸ್ಥಿತಿ ಚಿಂತಾಜನಕವಾಗಿದ್ದು, ರಾಯಚೂರು ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ಅವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕರಿಗೆ ಗುರುವಾರ ಮನವಿ ಸಲ್ಲಿಸಿದರು.
Vijaya Karnataka Web RAC-RCH26HD04


ಜಿಲ್ಲೆಯ ಮುಂಗಾರು ವಾಡಿಕೆ ಮಳೆ 226 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, ಕೇವಲ 115 ಮಿ.ಮೀ. ಮಳೆಯಾಗಿದೆ. ಶೇ.63 ರಷ್ಟು ಮಾತ್ರ ಬಿತ್ತನೆಯಾಗಿದೆ. ರಾಯಚೂರು ತಾಲೂಕಿನ ಮುಖ್ಯ ಬೆಳೆಗಳಾದ ತೊಗರಿ ಮತ್ತು ಹತ್ತಿ ಬಿತ್ತನೆ ಅವಧಿ ಅಂತ್ಯವಾಗಿರುವುದರಿಂದ ಬೀಜಗಳು ಮೊಳಕೆಯೊಡೆದಿಲ್ಲ. ಕೆಲವೆಡೆ ಮೊಳಕೆ ಬಂದ ಬೆಳೆ, ತೇವಾಂಶ ಕೊರತೆಯಿಂದ ಒಣಗುವ ಸ್ಥಿತಿಯಲ್ಲಿದೆ.

ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ.95 ರಷ್ಟು ಬಿತ್ತನೆ ಪೂರ್ಣಗೊಂಡಿತ್ತು. ಈ ವರ್ಷ ಶೇ.37 ರಷ್ಟು ಬಿತ್ತನೆ ಕಡಿಮೆಯಾಗಿದ್ದು, ಬಿತ್ತನೆಯಾಗಿರುವ ಕ್ಷೇತ್ರದಲ್ಲೂ ಮಳೆಯಿಲ್ಲದೇ ಬೆಳೆ ಒಣಗುವ ಹಂತದಲ್ಲಿದೆ. ಅಷ್ಟೇ ಅಲ್ಲದೆ ಕೃಷಿ ಆಧಾರಿತ ಪ್ರದೇಶವಾಗಿರುವುದರಿಂದ ಬೇರೆ ಉಪ ಕಸಬುಗಳಿಗೆ ಅವಕಾಶವಿಲ್ಲ. ಬರ ಪರಿಸ್ಥಿತಿಯಿಂದ ರೈತರು ಕಂಗಾಲಾಗಿ ನಗರ ಪ್ರದೇಶಗಳಿಗೆ ಗುಳೆ ಹೋಗುವ ವಾತಾವರಣ ಸೃಷ್ಟಿಯಾಗುತ್ತಿದೆ. ರೈತರ ನೆರವಿಗೆ ಸರಕಾರ ಧಾವಿಸಲು ರಾಯಚೂರು ತಾಲೂಕನ್ನು ಬರಪೀಡಿತ ಎಂದು ಘೋಷಿಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ